Breaking News

ಸೆ.19ರಂದು ಕನಕಗಿರಿ, ಸೆ.20ಕ್ಕೆ ಕಾರಟಗಿಯಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

Kanakagiri on September 19 and Karataggi on September 20 Taluk level Dussehra Games

ಜಾಹೀರಾತು

ಕೊಪ್ಪಳ ಸೆಪ್ಟೆಂಬರ್ 18 (ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ನೇಹಜೀವಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಗಂಗಾವತಿ ಇವರ ಸಹಯೋಗದೊಂದಿಗೆ 2023-24ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 19ರಂದು ಕನಕಗಿರಿ ನಗರದ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣ ಮತ್ತು ಸೆ.20ರಂದು ಕಾರಟಗಿ ನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ನಡೆಯಲಿದೆ.
ಕ್ರೀಡಾ ಸ್ಪರ್ಧೆಗಳು ನಿಗದಿತ ದಿನದಂದು ಬೆಳಿಗ್ಗೆ 9ಗಂಟೆಗೆ ನಡೆಯಲಿದ್ದು, ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿರುತ್ತವೆ. ಈ ಕ್ರೀಡಾಕೂಟದಲ್ಲಿ ರಕ್ಷಣಾಪಡೆ, ಅರೇ ರಕ್ಷಣಾ ಪಡೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅರ್ಹರಲ್ಲ. ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಯಾವ ವಯಸ್ಸಿನ ನಿರ್ಬಂಧವಿಲ್ಲ. ತಾಲೂಕು ಮಟ್ಟದಲ್ಲಿ ನಡೆಯುವ ಕ್ರೀಡೆಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.
ವಿಶೇಷ ಸೂಚನೆ: ವಿವಿಧ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಕ್ರೀಡಾಪಟುಗಳು ಮಾತ್ರ ಅರ್ಹರಿರುತ್ತಾರೆ. ಒಬ್ಬ ಕ್ರೀಡಾಪಟು ಅಥವಾ ತಂಡ ಯಾವುದೇ ಜಿಲ್ಲೆಯಲ್ಲಿ ಒಂದು ಬಾರಿ ತಾಲೂಕು ಅಥವಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ನಂತರ ಬೇರೆ ಯಾವುದೇ ಜಿಲ್ಲೆಯ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿಲ್ಲ. ಅಂತಹ ಪ್ರಕರಣವೇನಾದರೂ ದಾಖಲಾದಲ್ಲಿ ಅಥವಾ ಗಮನಕ್ಕೆ ಬಂದಲ್ಲಿ ತೀವ್ರ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. ಭಾಗವಹಿಸುವ ಕ್ರೀಡಾಪಟುಗಳು ಆಧಾರ್‌ಕಾರ್ಡ ಪ್ರತಿಯನ್ನು ತರಬೇಕು.
ದಸರಾ ಕ್ರೀಡಾಕೂಟಗಳ ಸ್ಪರ್ಧೆಗಳು: ಪುರುಷರಿಗೆ ವೈಯಕ್ತಿಕ ಸ್ಪರ್ಧೆಗಳಲ್ಲಿ ಅಥ್ಲೆಟಿಕ್ಸ್ (100, 200, 400, 800, 1500, 5000, 10000 ಮೀ.ಓಟ), ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿಧ ಜಿಗಿತ, ಗುಂಡು ಎಸೆತ, ಚಕ್ರ ಎಸೆತ, ಭಲ್ಲೆ ಎಸೆತ, 110 ಮೀ ರ‍್ಡಲ್ಸ್, 4100ರಿಲೇ ಮತ್ತು 4400 ರಿಲೇ ಹಾಗೂ ಗುಂಪು ಸ್ಪರ್ಧೆಗಳಲ್ಲಿ ವಾಲಿಬಾಲ್, ಕಬಡ್ಡಿ, ಖೋಖೋ, ಫುಟಬಾಲ್, ಥ್ರೋಬಾಲ್, ಯೋಗ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ಮಹಿಳೆಯರಿಗೆ ವೈಯಕ್ತಿಕ ಸ್ಪರ್ಧೆಗಳಲ್ಲಿ ಅಥ್ಲೆಟಿಕ್ಸ್ (100, 200, 400, 800, 1500, 3000 ಮೀ ಓಟ), ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿಧ ಜಿಗಿತ, ಗುಂಡು ಎಸೆತ, ಚಕ್ರ ಎಸೆತ, ಭಲ್ಲೆ ಎಸೆತ, 100 ಮೀ ರ‍್ಡಲ್ಸ್, 4100 ರಿಲೆ ಮತ್ತು 4400 ರಿಲೇ ಹಾಗೂ ಗುಂಪು ಸ್ಪರ್ಧೆಗಳಲ್ಲಿ ವಾಲಿಬಾಲ್, ಕಬಡ್ಡಿ, ಖೋಖೋ, ಫುಟಬಾಲ್, ಥ್ರೋಬಾಲ್, ಯೋಗ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ಮೊಬೈಲ್ ಸಂಖ್ಯೆ: 7676343554 ಹಾಗೂ ಕ್ರೀಡಾಕೂಟ ಸಂಘಟಕರಾದ ವಿಜಯಕುಮಾರ ಮೊಬೈಲ್ ಸಂಖ್ಯೆ: 7892274857ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಕುಷ್ಟಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: ನೋಂದಣಿಗೆ ಸೂಚನೆ

Kushtagi Taluk Level Dasara Games: Notice for registration ಕೊಪ್ಪಳ ಆಗಸ್ಟ್ 29 (ಕರ್ನಾಟಕ ವಾರ್ತೆ): 2025-26ನೇ ಸಾಲಿನ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.