Breaking News

ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಪರಿಸರ ಸ್ನೇಹಿ ಚಟುವಟಿಕೆ ಕೈಗೊಳ್ಳಲು ಸೂಚನೆ

World Tourism Day: Tips for eco-friendly activities

ಜಾಹೀರಾತು

ಕೊಪ್ಪಳ ಸೆಪ್ಟೆಂಬರ್ 22 (ಕರ್ನಾಟಕ ವಾರ್ತೆ): ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲೆಯ ಎಲ್ಲಾ ಹೋಟಲ್, ರೆಸಾರ್ಟ, ರೆಸ್ಟೋರೆಂಟ್ ಮತ್ತು ಹೋಮ್‌ಸ್ಟೇಗಳಲ್ಲಿ ಪರಿಸರ ಸ್ನೇಹಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಕೊಪ್ಪಳ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸೆಪ್ಟೆಂಬರ್ 27ರಂದು ನಡೆಯುವ ಪ್ರಸಕ್ತ ಸಾಲಿನ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2023 ಅನ್ನು “ಟೂರಿಜಂ & ಗ್ರೀನ್ ಇನ್ವೆಸ್ಟ್ಮೆಂಟ್ (TOURISM & GREEN INVESTMENTS)” ಎಂಬ ಸಂದೇಶಯೊಂದಿಗೆ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಹೋಟಲ್, ರೆಸಾರ್ಟ ಮತ್ತು ಹೋಮ್‌ಸ್ಟೇಗಳಿಗೆ ಕೆಲವು ಸಲಹೆ ಹಾಗೂ ಸೂಚನೆಗಳನ್ನು ಪಾಲಿಸಲು ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು ಸೂಚನೆ ನೀಡಿರುತ್ತಾರೆ.
ಅದರಂತೆ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯ ಎಲ್ಲಾ ಹೋಟಲ್, ರೆಸಾರ್ಟ ಮತ್ತು ಹೋಮ್‌ಸ್ಟೇಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಸ್ವಚ್ಛತೆ, ಪರಿಸರ ಮಾಲಿನ್ಯ ತಡೆಗಟ್ಟಲು ಹಾಗೂ ನೈರ್ಮಲ್ಯ ಶುಚಿತ್ವದ ಬಗ್ಗೆ ಅರಿವು ಮೂಡಿಸಬೇಕು. ಅಲ್ಲದೇ ವಿವಿಧ ಪರಿಸರ ಸ್ನೇಹಿ ಚಟುವಟಿಕೆಗಳನ್ನು ಪ್ರಸ್ತುತ ಪಡಿಸಲು ಎಲ್ಲಾ ಹೋಟಲ್, ರೆಸಾರ್ಟ ಮತ್ತು ರೆಸ್ಟೋರೆಂಟ್‌ಗಳಲ್ಲಿ ಈ ಬಾರಿಯ ವಿಶ್ವ ಪ್ರವಾಸೊದ್ಯಮ ದಿನಾಚರಣೆಯ ಥೀಮ್ ಅನ್ನು ಪರಿಸರ ಸ್ನೇಹಿ ಬಟ್ಟೆ (ಕ್ಲಾಥ್) ಬ್ಯಾನರ್‌ನಲ್ಲಿ ಮುದ್ರಿಸಿ ಪ್ರದರ್ಶಿಸಬೇಕು. ಸಾಂಪ್ರದಾಯಕ ಖ್ಯಾದಗಳನ್ನು ನೀಡುವುದು, ಪ್ರವಾಸಿ ತಾಣಗಳ ಕುರಿತು ವೀಡಿಯೋಗಳನ್ನು ಹೋಟಲ್‌ಗಳು ಹಾಗೂ ಕಚೇರಿಗಳಲ್ಲಿ ಪ್ರದರ್ಶಿಸಬೇಕು. ಸ್ವಚ್ಛತಾ ಅಭಿಯಾನ್ ಕೈಗೊಳ್ಳುವುದರೊಂದಿಗೆ ಸಸಿಗಳನ್ನು ನೆಡಸಬೇಕು. ವಿದ್ಯುತ್ ದಿಪಾಲಂಕಾರಗಳಿಂದ ಪ್ರದರ್ಶಿಸಬೇಕು. ಕೊಠಡಿಗಳ ದರಗಳಲ್ಲಿ ವಿಶೇಷ ರಿಯಾಯಿತಿಯನ್ನು ನೀಡುವುದು, ಹೋಟಲ್‌ಗಳಲ್ಲಿ ಛಾಯಾಚಿತ್ರಗಳನ್ನೊಳಗೊಂಡ ಸೆಲ್ಫಿ ಪಾಯಿಂಟಗಳನ್ನು ಅಳವಡಿಸುವುದು ಮತ್ತು ಕಾರ್ಯನಿರ್ವಹಿಸುವ ಎಲ್ಲಾ ಸಿಬ್ಬಂದಿಗಳಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಕೈಗೊಳ್ಳುವುದರೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಆಚರಿಸಿ, ಯಶ್ವಸಿಗೊಳಿಸುವಂತೆ ಪ್ರಕಟಣೆ ತಿಳಿಸಿದೆ.

About Mallikarjun

Check Also

ಕುಷ್ಟಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: ನೋಂದಣಿಗೆ ಸೂಚನೆ

Kushtagi Taluk Level Dasara Games: Notice for registration ಕೊಪ್ಪಳ ಆಗಸ್ಟ್ 29 (ಕರ್ನಾಟಕ ವಾರ್ತೆ): 2025-26ನೇ ಸಾಲಿನ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.