Inaugural program of Koppal district level Dussehra Games on September 26
ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ 2023-24ನೇ ಸಾಲಿನ “ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ”ವನ್ನು ಸೆಪ್ಟೆಂಬರ್ 26 ಮತ್ತು 27ರಂದು ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಕಾರ್ಯಕ್ರಮವು ಸೆ.26ರ ಬೆಳಗ್ಗೆ 10 ಗಂಟೆಗೆ ನಗರದ ಶ್ರೀ ಮಳೆಮಲ್ಲೇಶ್ವರ ದೇವಸ್ಥಾನ ಹಾಗೂ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಬಿ.ನಾಗೇಂದ್ರ ಅವರು ಘನ ಉಪಸ್ಥಿತರಿರುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ಬಸವರಾಜ ರಾಯರೆಡ್ಡಿ, ದೊಡ್ಡನಗೌಡ ಹನುಮಗೌಡ ಪಾಟೀಲ ಹಾಗೂ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ, ಉಪಾಧ್ಯಕ್ಷರಾದ ಆಯಿಶಾ ರುಬೀನಾ ಅವರು ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಪ್ರಸಾದ್ ಎನ್., ವಸತಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಶಶಿಕುಮಾರ ಎನ್., ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಕೊಪ್ಪಳ, ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾದ ಸಹಾಯಕ ಕ್ರೀಡಾಧಿಕಾರಿಗಳು, ಕೊಪ್ಪಳ ಜಿಲ್ಲೆಯ ಎಲ್ಲಾ ಜಿಲ್ಲಾ ಮತ್ತು ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರು ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ಸುನೀಲ್ ವಂಟಗೋಡಿ, ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಅಧಿಕಾರಿಗಳಾದ ವಿಠ್ಠಲ ಜಾಬಗೌಡರ ಹಾಗೂ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳಾದ ಎ.ಬಸವರಾಜ ಅವರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.