Koppal District Progress-Overview Seminar for September 26
ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಕೊಪ್ಪಳ ವಿಶ್ವವಿದ್ಯಾಲಯದಿಂದ ಕೊಪ್ಪಳ ಜಿಲ್ಲಾ ರಜತ ಮಹೋತ್ಸವ ಪ್ರಯುಕ್ತ ಕೊಪ್ಪಳ ಜಿಲ್ಲಾ ಪ್ರಗತಿಪಥ-ಅವಲೋಕನ'' ವಿಚಾರ ಸಂಕಿರಣವನ್ನು ಸೆಪ್ಟೆಂಬರ್ 26ರಂದು ಬೆಳಿಗ್ಗೆ 10.30ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಕೊಪ್ಪಳದ ಹಿರಿಯ ಸಾಹಿತಿಗಳಾದ ಎಚ್.ಎಸ್ ಪಾಟೀಲ ಅವರು ಪಾಲ್ಗೊಳ್ಳುವರು. ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ ರವಿ ಅವರು ಅಧ್ಯಕ್ಷತೆ ವಹಿಸುವರು. ಗೋಷ್ಠಿ: ಕೊಪ್ಪಳ ಜಿಲ್ಲಾ ಪ್ರಗತಿಪಥ-ಅವಲೋಕನ ವಿಚಾರ ಸಂಕಿರಣ ಪ್ರಯುಕ್ತ ಅಂದು ಮಧ್ಯಾಹ್ನ 12.15ರಿಂದ 2.15ರ ವರೆಗೆ ಗಂಗಾವತಿಯ ಎಸ್.ಕೆ.ಎನ್.ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ.ಜಾಜಿ ದೇವೇಂದ್ರಪ್ಪ ಅವರಿಂದ
ಕೊಪ್ಪಳ ಜಿಲ್ಲೆಯ ಕಲೆ, ಶಿಕ್ಷಣ, ಸಾಹಿತ್ಯಿಕ ಪರಂಪರೆ” ವಿಷಯದ ಬಗ್ಗೆ ಮತ್ತು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಶರಣಬಸಪ್ಪ ಬಿಳೆಯಲಿ ಅವರಿಂದ “ಕೊಪ್ಪಳ ಜಿಲ್ಲೆಯ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿ” ವಿಷಯದ ಕುರಿತು ಗೋಷ್ಠಿ ನಡೆಯಲಿದೆ. ಈ ಗೋಷ್ಠಿಯ ಅಧ್ಯಕ್ಷತೆಯನ್ನು ಕೊಪ್ಪಳದ ಹಿರಿಯ ಸಾಹಿತಿಗಳಾದ ಪ್ರೊ. ಅಲ್ಲಮಪ್ರಭು ಬೆಟ್ಟದೂರ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೊಪ್ಪಳ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಪ್ರೊ. ಮನೋಜ್ ಡೊಳ್ಳಿ, ಕೊಪ್ಪಳ ವಿಶ್ವವಿದ್ಯಾಲಯದ ಪ್ರಭಾರ ಕುಲಸಚಿವರಾದ ಪ್ರೊ ಕೆ.ವಿ ಪ್ರಸಾದ್ ಹಾಗೂ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮತ್ತು ಸಂಶೋದನಾ ವಿದ್ಯಾರ್ಥಿಗಳು ಭಾಗವಹಿಸಿಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.