Breaking News

ಸೆ.27ರಂದು ಆನೆಗೊಂದಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

World Tourism Day celebration at Anegondi on 27th September

ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಆನೆಗೊಂದಿ ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ “ಪ್ರವಾಸೋದ್ಯಮ ಮತ್ತು ಹಸಿರು ಹೂಡಿಕೆಗಳು” ಎಂಬ ಸಂದೇಶದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 27ರಂದು ಬೆಳಿಗ್ಗೆ 10ಗಂಟೆಗೆ ಗಂಗಾವತಿ ತಾಲೂಕಿನ ಆನೆಗೊಂದಿಗೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ದೊಡ್ಡನಗೌಡ ಹನುಮಗೌಡ ಪಾಟೀಲ ಹಾಗೂ ಕೆ.ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಆನೆಗೊಂದಿ ಗ್ರಾಪಂ ಅಧ್ಯಕ್ಷರಾದ ಕೆ.ಮಹಾದೇವಿ ತಿಮ್ಮಪ್ಪ ಬಾಳೆಕಾಯಿ ಅವರು ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ವಸತಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್ ಅವರು ಭಾಗವಹಿಸುವರು. ಕಾರ್ಯಕ್ರಮದ ಅಂಗವಾಗಿ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಶುಪಾಲರಾದ ಡಾ ಕೆ.ವೆಂಕಟೇಶ್ ಅವರು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾದ ಡಾ ರಾಮ್ ಪ್ರಸಾತ್ ಮನೋಹರ ವಿ., ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ಸುನೀಲ್ ವಂಟಗೋಡಿ, ಕೊಪ್ಪಳ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಡಿ.ನಾಗರಾಜ ಅವರು ಉಪಸ್ಥಿತರಿರುವರು.
ವಿವಿಧ ಕಾರ್ಯಕ್ರಮ: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಆನೆಗೊಂದಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಸೆ.26ರಂದು ರಂಗೋಲಿ ಸ್ಪರ್ಧೆ, ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆಗಳು ಮತ್ತು ಸೆ.27ಕ್ಕೆ ಸಸಿ ನೆಡುವ ಕಾರ್ಯಕ್ರಮ ಹಾಗೂ ಇತರ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ನಾಗರಾಜ ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು, ದಂಡವಸೂಲಿ.

ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಬಿಜೆಪಿ ಮುಖಂಡ ಆಗಿರುವ ಮಹಿಬೂಬ್ ಸಾಬ್ ಮುಲ್ಲಾ (ಎಂ.ಡಿ.ಎಸ್) ತಂದೆ ಮೋದಿನ್ ಸಾಬ್ ಈತನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.