Breaking News

ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Application Invitation for National Means-cum-Merit Scholarship

ಜಾಹೀರಾತು

ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): ಮುನಿರಾಬಾದನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಯಿಂದ 2023-24ನೇ ಸಾಲಿನಲ್ಲಿ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ 8ನೇ ತರಗತಿ ವಿದ್ಯಾರ್ಥಿಗಳಿಗೆ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನ (National Means-Merit Scholarship-NMMS) ಪರೀಕ್ಷೆಯನ್ನು ಡಿಸೆಂಬರ್ 17ರಂದು ನಡೆಸಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಲಿಯು ನಿರ್ಧರಿಸಿದೆ. ಈ ವಿದ್ಯಾರ್ಥಿ ವೇತನ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 04ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ 8ನೇ ತರಗತಿ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸುವಂತೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಯ ಪ್ರಾಂಶುಪಾಲರು ಮತ್ತು ಪದನಿಮಿತ್ತ ಉಪನಿರ್ದೇಶಕರು(ಅಭಿವೃದ್ಧಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಸುವರ್ಣ ಸಾಧಕಿ ಪ್ರಶಸ್ತಿಗೆ ಭಾಜನರಾದ. ರೂಪರಾಣಿ ಲಕ್ಷ್ಮಣ್

Winner of the Golden Achievement Award. Rooprani Laxman. ಗಂಗಾವತಿ. ನಗರದ ಆರ್ಯವೈಶ್ಯ ಸಮಾಜದ ಅಧ್ಯಕ್ಷ ಶ್ರೀಮತಿ ರೂಪಾರಾಣಿ …

Leave a Reply

Your email address will not be published. Required fields are marked *