Breaking News

ಕೊಪ್ಪಳ ಜಿಲ್ಲೆಗೆ ಹೊಸದಾಗಿ ಮೂರು ಪದವಿಪೂರ್ವಕಾಲೇಜುಗಳು ಮಂಜೂರಾಗಿವೆ : ಜಗದೀಶ ಜಿ.ಎಚ್.

Three new pre-degree colleges have been sanctioned for Koppal district: Jagdeesha G.H.

ಜಾಹೀರಾತು

ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಮಸಬಹಂಚಿನಾಳ, ಕುದರಿಮೋತಿ, ಗುನ್ನಾಳ ಈ ಮೂರು ಊರುಗಳಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜುಗಳು ಮಂಜೂರಾಗಿದ್ದು, ಅಕ್ಟೋಬರ್ ೨ ಗಾಂಧಿ ಜಯಂತಿಯಂದು ಪ್ರಾರಂಭವಾಗಲಿವೆ ಎಂದು ಕೊಪ್ಪಳದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಗದೀಶ ಜಿ. ಎಚ್. ಅವರು ಹೇಳಿದರು.

ಅವರು ಬುಧವಾರ ಕೊಪ್ಪಳ ತಾಲೂಕಿನ ಜ್ಞಾನಬಂಧು ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ಅಸೈನ್ಮೆಂಟ್ ಮತ್ತು ಪ್ರಾಜೆಕ್ಟ್ ವರ್ಕ್ಸ್ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಅವರು ಮುಂದುವರೆದು ಮಾತನಾಡುತ್ತಾ, ದ್ವಿತೀಯ ಪಿಯುಸಿ ಫಲಿತಾಂಶವನ್ನು ಸುಧಾರಿಸುವ ನಿಟ್ಟಿನಲ್ಲಿ ನಾವೆಲ್ಲ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕಾಗಿದೆ. ಈ ಸಲದ ದ್ವಿತೀಯ ಪಿಯುಸಿ ಫಲಿತಾಂಶವು ಇಡೀ ರಾಜ್ಯಮಟ್ಟದಲ್ಲಿಯೇ ೧೦ನೇ ಸ್ಥಾನಕ್ಕಿಂತಲೂ ಒಳಗಡೆಗೆ ಬರುವ ಹಾಗೆ ಸಿದ್ಧತೆ ಮಾಡಿಕೊಂಡು ಆ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪ್ರಾಚಾರ್ಯರು ಮತ್ತು ಉಪನ್ಯಾಸಕರು ಶಕ್ತಿಮೀರಿ ಪ್ರಯತ್ನಿಸುತ್ತೇವೆ ಎಂದರು.

ಪ್ರಾಚಾರ್ಯರ ಸಂಘದ ಜಿಲ್ಲಾಧ್ಯಕ್ಷರಾದ ಜಿ. ಅನೀಲಕುಮಾರ ಅವರು ಮಾತನಾಡುತ್ತಾ, ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯ ಸಂಘ ಹಾಗೂ ಕೊಪ್ಪಳ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ವತಿಯಿಂದ ಹೊರತಂದಿರುವ ಈ ಅಸೈನ್ಮೆಂಟ್ ಮತ್ತು ಪ್ರಾಜೆಕ್ಟ್ ವರ್ಕ್ಸ್ ಪುಸ್ತಕದ ಸದುಪಯೋಗಪಡಿಸಿಕೊಂಡು ಜಿಲ್ಲೆಯಲ್ಲಿ ಫಲಿತಾಂಶ ಸುಧಾರಣೆಗಾಗಿ ನಾವೆಲ್ಲರೂ ಸಹಕರಿಸೋಣ ಎಂದರು. 

ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾದ ಸೋಮಶೇಖರಗೌಡ ಕರಡೋಣಿ ಅವರು ಮಾತನಾಡುತ್ತಾ, ಮುಂದಿನ ತಿಂಗಳಲ್ಲಿ ಉಪನಿರ್ದೇಶಕರ ನೇತೃತ್ವದಲ್ಲಿ ಎಲ್ಲಾ ವಿಷಯಗಳ ಕಾರ್ಯಾಗಾರವನ್ನು ಹಮ್ಮಿಕೊಂಡು ಜಿಲ್ಲೆಯ ಫಲಿತಾಂಶ ಹೆಚ್ಚಳಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ ಎಂದರು.

ಭಾಗ್ಯನಗರ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ರಾಜಶೇಖರ ಪಾಟೀಲ ಮಾತನಾಡುತ್ತಾ, ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ ಅಸೈನಮೆಂಟ್ ಮತ್ತು ಪ್ರೊಜೆಕ್ಟ್ ವರ್ಕ್ಸ್ ಈ ಪುಸ್ತಕ ರಚನೆಯಲ್ಲಿ ಡಾ.ರವಿ. ಎನ್. ಚವ್ಹಾಣ ಅವರು ವಿಶೇಷ ಆಸಕ್ತಿವಹಿಸಿ ಅಚ್ಚುಕಟ್ಟಾಗಿ ಮುದ್ರಣಗೊಂಡು ಹೊರಬರುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದಕ್ಕಾಗಿ ಅವರಿಗೆ ಉಪನಿದೇಶಕರ, ಪ್ರಾಚಾರ್ಯರ ಸಂಘದ, ಉಪನ್ಯಾಸಕರ ಸಂಘದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದರು.

ಜ್ಞಾನಬಂಧು ಪದವಿ ಪೂರ್ವ ವಿದ್ಯಾಲಯದ ಪ್ರಾಚಾರ್ಯರಾದ ವಿಶ್ವನಾಥ ವೇದಿಕೆ ಮೇಲೆ ಉಪಸ್ಥಿತರಿದ್ದರು. ಡಾ.ರವಿ ಚವ್ಹಾಣ ಕಾರ್ಯಕ್ರಮವನ್ನು ನಿರೂಪಿಸಿದರು. ನಾರಾಯಣ ವೈದ್ಯ ವಂದಿಸಿದರು.

About Mallikarjun

Check Also

ಜೆಜೆಎಂ ಕಾಮಗಾರಿ ಅವೈಜ್ಞಾನಿಕ :ಮಳೆ ನೀರು ಗ್ರಾಮದೊಳಕ್ಕೆ ಸಾರ್ವಜನಿಕರಆಕ್ರೋಶ

JJM’s work is unscientific: Public outrage over rain water in the village ವರದಿ : ಪಂಚಯ್ಯ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.