Child marriage outlawed-Manjunath
ಗಂಗಾವತಿ: ಹಿರೇಮಠ, ಬಾಲ್ಯ ವಿವಾಹ ಕಾನೂನು ಬಾಹಿರವಾಗಿದ್ದು ಯಾವುದೇ ಕಾರಣಕ್ಕೂ ಸರಕಾರ ನಿಗದಿಪಡಿಸಿದ ವಯಸ್ಸಿಗೆ ಅನುಗುಣವಾಗಿ ಮುಂದಾಗಬೇಕೆಂದು ತಹಶೀಲ್ದಾರ್ ಮಂಜುನಾಥ್ ಹೇಳಿದರು ಶನಿವಾರದಂದು ಮಂಥನ ಸಭಾಂಗಣದಲ್ಲಿ
ರಿಡ್ಸ್ ಸಂಸ್ಥೆ, ಕಂದಾಯ ಇಲಾಖೆ, ಸಿಡಿಪಿಓ ಹಾಗೂ ತಾ.ಪಂ. ಸಂಯುಕ್ತ ಆಶ್ರಯದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಕಾರ್ಯಗಾರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು, ವಿವಾಹ ಕಲ್ಪನೆಗಳು ಇಲ್ಲದೆ ಇರತಕ್ಕಂತಹ ಆ ಪ್ರಾಪ್ತ ಬಾಲಕಿ ವಿದ್ಯಾರ್ಥಿಗಳನ್ನು ಬಾಲ್ಯ ವಿವಾಹ ಕಾನೂನು ಪ್ರಕಾರ ಅಪರಾಧವಾಗಿದೆ ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯ ಹೆಚ್ಚು ಹೆಚ್ಚು ಜರುಗ ಬೇಕೆಂದು ತಿಳಿಸಿದರು ಈ ಸಂದರ್ಭದಲ್ಲಿ
ಶಾಲಾ ಮುಖ್ಯೋಪಾಧ್ಯಾಯರು, ತಾಪಂ ಸಿಬ್ಬಂದಿಗಳು, ಗ್ರಾಪಂ ಅಧಿಕಾರಿಗಳು ಸೇರಿ ಇತರೆ ಸಿಬ್ಬಂದಿಗಳಿಗೆ ಕಾರ್ಯಾಗಾರ ನಡೆಯಿತು.
ಇದೇ ವೇಳೆ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಜಾಗೃತಿ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ, ಸಿಡಿಪಿಓ ರೋಹಿಣಿ ಕೊಟಗಾರ್, ರಿಡ್ಸ್ ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕರು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಇದ್ದರು.