Breaking News

ಶ್ರಮದಾನ ಮೂಲಕ ಗಾಂಧೀಜಯಂತ್ಯುತ್ಸವಕ್ಕೆ ಚಾಲನೆ

Drive for Gandhi Jayanthutsavam through Shramdan

ಜಾಹೀರಾತು

* ಪೌರಕಾರ್ಮಿಕರೊಂದಿಗೆ ಶ್ರಮದಾನ ಮಾಡಿದ ಅಧಿಕಾರಿಗಳು, ಸಿಬ್ಬಂದಿ

ಗಾಂಧೀ ಜಯಂತಿ: ಅಧಿಕಾರಿ, ಸಿಬ್ಬಂದಿಯಿಂದ ಶ್ರಮದಾನ

ಕೊಪ್ಪಳ ಸೆಪ್ಟೆಂಬರ್ 30 (ಕರ್ನಾಟಕ ವಾರ್ತೆ): ಮಹಾತ್ಮ ಗಾಂಧೀಜಿಯವರ 154ನೇ ಜಯಂತಿ ಆಚರಣೆ ಪ್ರಯುಕ್ತ ಶ್ರಮದಾನ ಕಾರ್ಯಕ್ರಮವು ಜಿಲ್ಲಾಡಳಿತ ಭವನದ ಆವರಣದಲ್ಲಿ ಸೆಪ್ಟೆಂಬರ್ 30ರಂದು ನಡೆಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕೊಪ್ಪಳ ನಗರಸಭೆ, ನಗರಾಭಿವೃದ್ದಿ ಕೋಶ, ಸಮಾಜ ಕಲ್ಯಾಣ, ಅಲ್ಪ ಸಂಖ್ಯಾತರ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶ್ರಮದಾನ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಹಾಗೂ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಚಾಲನೆ ನೀಡಿದರು.
ಮಹಾತ್ಮ ಗಾಂಧೀಜಿಯವರು ಶ್ರಮ ಸಂಸ್ಕೃತಿ ಮತ್ತು ಸ್ವಚ್ಛತಾ ಕಾರ್ಯಕ್ಕೆ ಸಹ ಮಹತ್ವ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರ ಮಾರ್ಗದರ್ಶನದಲ್ಲಿ ಗಾಂಧೀ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯು ಬೆಳಗ್ಗೆ ಜಿಲ್ಲಾಡಳಿತ ಭವನಕ್ಕೆ ಆಗಮಿಸಿ ಬೆಳಗ್ಗೆ 7 ರಿಂದ 9 ಗಂಟೆವರೆಗೆ ಎರಡು ಗಂಟೆಗಳ ಕಾಲ ಜಿಲ್ಲಾಡಳಿತ ಭವನದ ಆವರಣವನ್ನು ಶುಚಿಗೊಳಿಸಿದರು. ಕೈಯಲ್ಲಿ ಸಲಿಕೆ, ಪೊರಕೆ, ಬುಟ್ಟಿ ಮತ್ತು ಇತರ ಪರಿಕರಗಳನ್ನು ಹಿಡಿದುಕೊಂಡು ಅಧಿಕಾರಿಗಳು ಮತ್ತು ಸಿಬ್ಬಂದಿ ಶ್ರಮದಾನದಲ್ಲಿ ಭಾಗಿಯಾದರು. ಕೊಪ್ಪಳ ನಗರಸಭೆಯ ಪೌರಕಾರ್ಮಿಕರೊಂದಿಗೆ ಶ್ರಮದಾನ ನಡೆಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಅಪರ ಜಿಲ್ಲಾಧಿಕಾರಿಗಳು ಈ ಕಾರ್ಯಕ್ರಮದ ನೇತೃತ್ವ ವಹಿಸಿ, ಎಲ್ಲಾ ಅಧಿಕಾರಿ, ಸಿಬ್ಬಂದಿಯೊಂದಿಗೆ ಶ್ರಮದಾನದಲ್ಲಿ ಭಾಗಿಯಾದರು. ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡಗಳಾಗಿ ವಿವಿಧೆಡೆ ಕಸ ಗೂಡಿಸಿ, ಕಸವನ್ನು ಬುಟ್ಟೆಯಲ್ಲಿ ತುಂಬಿ ಶುಚಿಗೊಳಿಸಿದರು.
ನಗರಸಭೆಯಿಂದ ಸಹಕಾರ: ಸ್ವಚ್ಛತಾ ಶ್ರಮದಾನಕ್ಕೆ ಕೊಪ್ಪಳ ನಗರಸಭೆ ಪೌರಾಯುಕ್ತರಾದ ಗಣಪತಿ ಪಾಟೀಲ ಅವರು ವಿಶೇಷ ವ್ಯವಸ್ಥೆ ಮಾಡಿದ್ದರು. ಜೆಸಿಬಿ, ಟಿಪ್ಪರ್ ಜೊತೆಗೆ ನಗರಸಭೆ ಕಸ ಹೊತ್ತೋಯ್ಯುವ ವಾಹನಗಳ ವ್ಯವಸ್ಥೆ ಮಾಡಿದ್ದರು. ಜೊತೆಗೆ ಶ್ರಮದಾನದಲ್ಲಿ ಭಾಗಿಯಾದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹ್ಯಾಂಡ್ ಗ್ಲೌಸ್ ಮತ್ತು ಮಾಸ್ಕ ವಿತರಣೆಗೆ ಕ್ರಮ ವಹಿಸಿದ್ದರು. ಸಲಿಕೆ, ಕಸಬಾರಿಗೆ ಸೇರಿದಂತೆ ಸ್ವಚ್ಛತೆಗೆ ಬೇಕಾಗುವ ಪರಿಕರಗಳನ್ನು ಸಹ ಪೂರೈಸಿದರು. ಪೌರ ಕಾರ್ಮಿಕರನ್ನು ಮತ್ತು ಕಸವಿಲೇವಾರಿ ವಾಹನಗಳನ್ನು ಒದಗಿಸಿ ನಗರಸಭೆ ಪೌರಾಯುಕ್ತರು ಕಾರ್ಯಕ್ರಮಕ್ಕೆ ಅಗತ್ಯ ಸಹಕಾರ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಟಿ.ಕೃಷ್ಣಮೂರ್ತಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕಾವ್ಯರಾಣಿ ಕೆ.ವಿ., ಕೊಪ್ಪಳ ತಹಸೀಲ್ದಾರರಾದ ವಿಠ್ಠಲ ಚೌಗಲಾ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ನಂದಕುಮಾರ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀಶೈಲ ಬಿರಾದಾರ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳಾದ ಪ್ರಾಣೇಶ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಚಿದಾನಂದ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುರೇಶ ಕೋಕರೆ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಶ್ರಮದಾನದಲ್ಲಿ ಭಾಗಿಯಾದರು.

About Mallikarjun

Check Also

ದಸರಾ ಮಹೋತ್ಸವದ ಅಂಗವಾಗಿ ಕಲ್ಮಠದಲ್ಲಿ ಸರ್ವಧರ್ಮ ಸಮ್ಮೇಳನ

Interfaith conference in Kalmath as part of Dussehra celebrations ಮಾನ್ವಿ: ಪಟ್ಟಣದ ಮುಕ್ತಾಗುಚ್ಚ ಬೃಹನ್ಮಠದಲ್ಲಿ 49 ನೇ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.