Valmiki Gurupeeth special state level meeting to end confusion
ಕೊಪ್ಪಳ; ಇತ್ತೀಚೆಗೆ ವಾಟ್ಸಪ್, ಫೇಸ್ ಬುಕ್ ಹಾಗೂ ಇತರೆ ಸಾಮಾಜಿಕ ಜಾಲತಾಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ರಾಜನಹಳ್ಳಿಯ ಕುರಿತು ಅದರ ಪೀಠಾಧಿಕಾರಿಗಳಾದ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳ ಬಗ್ಗೆ ಅನೇಕ ಗೊಂದಲಮಯ ಮತ್ತು ಸುಳ್ಳು ಸುದ್ದಿಗಳನ್ನು ಹರಡಿಸುತ್ತಿದ್ದು ಎಲ್ಲದಕ್ಕೂ ಉತ್ತರ ನೀಡಲು, ಎಲ್ಲಾ ಗೊಂದಲದ ಹೇಳಿಕೆಗೆ ಸ್ಪಷ್ಟಿಕರಣ ನೀಡುವ ಕುರಿತು ಅ. ೧ ರಂದು ಭಾನುವಾರ ಬೆಳಗ್ಗೆ ೧೦.೩೦ಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ರಾಜನಹಳ್ಳಿಯಲ್ಲಿ ರಾಜ್ಯ ಮಟ್ಟದ ಮಹತ್ವದ ಸಭೆಯನ್ನು ಆಯೋಜಿಸಲಾಗಿದೆ.
ಈ ಸಭೆಯಲ್ಲಿ ಶ್ರೀಮಠದ ಧರ್ಮದರ್ಶಿಗಳು, ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳು, ರಾಜ್ಯ ಸಂಘಟನೆಯ ಎಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು, ಬಿ.ಎಲ್.ಎಸ್. ಪದಾಧಿಕಾರಿಗಳು, ಕ್ರಿಯಾ ಸಮಿತಿ ಸಂಚಾಲಕರು, ನೌಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮಹಿಳಾ ಸಂಘಟನೆಯ ಅದ್ಯಕ್ಷರು ಹಾಗೂ ಪದಾಧಿಕಾರಿಗಳು, ವಿವಿಧ ಸಂಘಟನೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಿವೃತ್ತ ನೌಕರರು, ಯುವ ಸಂಘಟನೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಭಾಗವಹಿಸಲು ಅವಕಾಶ ಕಲ್ಪಸಲಾಗಿದೆ ಎಂದು ಜಿಲ್ಲಾ ಧರ್ಮದರ್ಶಿ ರಾಮಣ್ಣ ಕಲ್ಲನವರ ಮತ್ತು ಜಿಲ್ಲಾಧ್ಯಕ್ಷ ಟಿ. ರತ್ನಾಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಠದ ಕುರಿತು ಜಿಲ್ಲೆಯಲ್ಲಿ ಇನ್ನೂ ಯಾರಿಗಾದರೂ ಯಾವುದೇ ಅನುಮಾನ, ಸಂಶಯವಿದ್ದರೆ ಎಲ್ಲರೂ ನಮ್ಮೊಂದಿಗೆ ಶ್ರೀಮಠದಲ್ಲಿ ನಡೆಯುವ ರಾಜ್ಯ ಮಟ್ಟದ ಸಭೆಯಲ್ಲಿ ಭಾಗವಹಿಸಿ ಮುಕ್ತವಾಗಿ ವಿಷಯ ಪ್ರಸ್ತಾಪಿಸಿ, ಈ ಬಗ್ಗೆ ಸ್ಪಷ್ಟಿಕರಣ ಪಡೆಯಲು ಸಭೆಯಲ್ಲಿ ಭಾಗವಹಿಸಲು ಕೋರಲಾಗಿದೆ.
ಈ ಸಭೆಯಲ್ಲಿ ಸಮಾಜದ ಪ್ರತಿಯೊಬ್ಬರಿಗೂ ಮುಕ್ತವಾಗಿ ಚರ್ಚಿಸಲು ಅವಕಾಶವಿದ್ದು ಸಮಾಜದ ಬಗ್ಗೆ ಸಾಮಾಜಿಕ ಕಳಕಳಿಯುಳ್ಳ ಪ್ರತಿಯೊಬ್ಬರು ಈ ಸಭೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ತಿಳಿಸಿದ್ದಾರೆ.