Gandhi Gram Puraskar for Waddarahatti Grampange
ಬೆಂಗಳೂರಿನಲ್ಲಿ ಪ್ರಶಸ್ತಿ ಸ್ವೀಕಾರ ಮಾಡಿಕೊಂಡ ಗ್ರಾಪಂ ಅಧ್ಯಕ್ಷರು, ಅಧಿಕಾರಿಗಳು
ಗಂಗಾವತಿ : ಬೆಂಗಳೂರಿನ ವಿಧಾನಸಭಾ ಸಭಾಭವನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಗಾಂಧಿ ಗ್ರಾಮ ಪುರಸ್ಕಾರವನ್ನು ತಾಲೂಕಿನ ವಡ್ಡರಹಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಎಚ್ ಮಂಜುಳಾ ಶಿವಪ್ಪ ಹತ್ತಿಮರದ, ಉಪಾಧ್ಯಕ್ಷರಾದ ಗೌಸ್ ಸಾಬ್ ತಾಳಕೇರಿ, ಪಿಡಿಓ ಕಾಶಿನಾಥ ಹಂಚಿನಾಳ ಸ್ವೀಕಾರ ಮಾಡಿಕೊಂಡರು.
ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ ಹಾಗೂ ಆರ್ ಡಿಪಿಆರ್ ಇಲಾಖೆ ಸಚಿವರಾದ ಪ್ರಿಯಾಂಕ ಖರ್ಗೆ ಅವರಿಂದ ವಡ್ಡರಹಟ್ಟಿ ಗ್ರಾಮ ಪಂಚಾಯತಿ ಅವರು ಗ್ರಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಸ್ವೀಕಾರ ಮಾಡಿಕೊಂಡರು.
ಈ ವೇಳೆ ಸರಕಾರದ ಮುಖ್ಯಕಾರ್ಯದರ್ಶಿಗಳಾದ ವಂದಿತಾ ಶರ್ಮಾ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಉಮಾ ಮಹಾದೇವನ್, ಸರಕಾರದ ಪ್ರಧಾನ ಕಾರ್ಯದರ್ಶಿಗಳಾದ ಅಂಜುಮ್ ಪರ್ವೇಜ್, ಪಂಚಾಯತ್ ರಾಜ್ ಆಯುಕ್ತಾಲಯ ಆಯುಕ್ತರಾದ ಪ್ರಿಯಾಂಕ ಮೇರಿ ಪ್ರಾನ್ಸಿಸ್, ಆರ್ ಡಬ್ಲ್ಯುಎಸ್ ನಿರ್ದೇಶಕರಾದ ನಾಗೇಂದ್ರ ಪ್ರಸಾದ್ ಕೆ, ಕೊಪ್ಪಳ ಜಿಪಂ ಉಪ ಕಾರ್ಯದರ್ಶಿಗಳಾದ ಮಲ್ಲಪ್ಪ ತೊದಲಬಾಗಿ
ಇದ್ದರು.
ವಡ್ಡರಹಟ್ಟಿ ಗ್ರಾಮ ಪಂಚಾಯತ್ ಗೆ ಗ್ರಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಲಬಿಸಿದ್ದಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.