Breaking News

ಉಪಲೋಕಾಯುಕ್ತರಿಂದ ಅಹವಾಲು ಸ್ವೀಕಾರ, ವಿಚಾರಣೆ:ಸದುಪಯೋಗಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮನವಿ

Receipt of report by Deputy Lokayukta, Inquiry: Request of District Legal Services Authority for utilization

ಕೊಪ್ಪಳ ಅಕ್ಟೋಬರ್ 03 (ಕರ್ನಾಟಕ ವಾರ್ತೆ): ಗೌರವಾನ್ವಿತ ಉಪಲೋಕಾಯುಕ್ತರಿಂದ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ಕಾರ್ಯಕ್ರಮವು ಅಕ್ಟೋಬರ್ 07ರಿಂದ ಅ. 09ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೇವೇಂದ್ರ ಪಂಡಿತ್‌ ಅವರು ತಿಳಿಸಿದ್ದಾರೆ.
ಗೌರವಾನ್ವಿತ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎಸ್. ಫಣೀಂದ್ರ ಅವರು ಅಕ್ಟೋಬರ್ 07 ರಿಂದ ಅ. 09ರ ವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 01-30 ರವರೆಗೆ ಹಾಗೂ ಮಧ್ಯಾಹ್ನ 02.30 ರಿಂದ 05 ಗಂಟೆಯವರೆಗೆ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ಮಾಡಲಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ ಅಥವಾ ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದಲ್ಲಿ ಅಥವಾ ಅಧಿಕಾರಿ, ನೌಕರರು ನ್ಯಾಯಯುತವಾಗಿ ಮಾಡಿ ಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ಗೌರವಾನ್ವಿತ ಉಪ ಲೋಕಾಯುಕ್ತರ ಮುಂದೆ ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದು ಹಾಗೂ ಸದುಪಯೋಗವನ್ನು ಪಡೆದುಕೊಳ್ಳವ ಜೊತೆಗೆ ಇದೆ ಅವಧಿಯಲ್ಲಿ ಅ. 7ರಿಂದ ಅ. 9ರವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30ರವರೆಗೆ ಹಾಗೂ ಮಧ್ಯಾಹ್ನ 02.30ರಿಂದ ಸಂಜೆ, 05 ಗಂಟೆಯವರೆಗೆ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲೆಗೆ ಸಂಬಂಧಪಟ್ಟಂತೆ (ಗೌರವಾನ್ವಿತ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯವಾಪ್ತಿಗೆ ಒಳಪಡುವ ಪ್ರಕರಣಗಳಿಗೆ ) ತನಿಖೆ ಅಥವಾ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆಯನ್ನು ಗೌರವಾನ್ವಿತ ಉಪಲೋಕಾಯುಕ್ತರು ನಡೆಸುತ್ತಾರೆ. ಆದ್ದರಿಂದ ದೂರುದಾರರು ನಿಗದಿತ ಸಮಯದಲ್ಲಿ ಹಾಜರಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೊಪ್ಪಳ ಜಿಲ್ಲೆಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯ ಪ್ರಕಟಣೆ ತಿಳಿಸಿದೆ.

About Mallikarjun

Check Also

ಅಶೋಕಸ್ವಾಮಿ ಹೇರೂರಭೇಟಿ:ಕಾಂಗ್ರೆಸ್ಸಿಗರಿಂದಮತಯಾಚನೆ.

ಗಂಗಾವತಿ:ರಾಜ್ಯ ವಾಣಿಜೋಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ನಿರ್ದೇಶಕ ಮತ್ತು ರಾಜ್ಯ ಔಷಧ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರನ್ನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.