Collector’s response
ಕೊಪ್ಪಳ, ಬರ ಇದ್ದಾಗಲು ಬೆಳೆಗಳು ಹಸಿರಾಗಿರುತ್ತವೆ. ಬೆಳೆಗಳು ಹಸಿರಾಗಿದ್ದಾಗ್ಯು ಇಳುವರಿನಲ್ಲಿ ಕುಂಠಿತವಾಗುತ್ತದೆ ಎಂಬುದನ್ನು ಗಮನಿಸಬೇಕಾಗುತ್ತದೆ. ಕೊಳವೆಬಾವಿಯ ನೀರಾವರಿ ಪ್ರದೇಶ, ಹಸಿರು ಬೆಳೆ ಪ್ರದೇಶ ಇದ್ದಾಗ್ಯೂ ಮಳೆಯಾಗದೇ ಕುಷ್ಟಗಿ ತಾಲೂಕಿನ ಬಹುತೇಕ ಪ್ರದೇಶದಲ್ಲಿನ ಹಸಿರು ಬೆಳೆಯಿಂದ ಅತೀ ಕಡಿಮೆ
ಇಳುವರಿ ಬಂದು ರೈತರಿಗೆ ಸಾಕಷ್ಟು ಹಾನಿಯಾಗಿದೆ
ಎಂಬುದರ ಬಗ್ಗೆ ಮನವರಿಕೆ ಮಾಡಲು, ಅತಿ ಕಡಿಮೆ ಮಳೆ ಬಿದ್ದ ಕುಷ್ಟಗಿ ತಾಲೂಕಿಗೆ ಬರ ಅಧ್ಯಯನ ತಂಡವನ್ನು ಕರೆಯಿಸಿ,
ತಂಡದಲ್ಲಿನ ಅಧಿಕಾರಿಗಳಿಗೆ ಇಲ್ಲಿನ ಬರ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಲಾಗಿದೆ ಎಂದು ಕೊಪ್ಪಳ
ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸುದ್ದಿಗಾರರಿಗೆ ತಿಳಿಸಿದರು.