Receipt of report, Inquiry Innovative program: N.V. Sreeshananda
ಕೊಪ್ಪಳ ಅಕ್ಟೋಬರ್ 08 (ಕ.ವಾ.): ಕರ್ನಾಟಕ ಲೋಕಾಯುಕ್ತ ಸಂಸ್ಥೆಯು ಬೇರೆ ಬೇರೆ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳುತ್ತಿರುವ ಸಾರ್ವಜನಿಕ ಅಹವಾಲು ಸ್ವೀಕಾರ ಮತ್ತು ವಿಚಾರಣೆ ಕಾರ್ಯಕ್ರಮದಿಂದಾಗಿ ಸಾರ್ವಜನಿಕರು, ಅಧಿಕಾರಿಗಳು ಮತ್ತು ಲೋಕಾಯುಕ್ತ ಸಂಸ್ಥೆಯ ಮಧ್ಯೆ ಒಂದು ಸೌಹಾರ್ದಯುತ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕೊಪ್ಪಳ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾ.ವಿ.ಶ್ರೀಶಾನಂದ ಅವರು ಹೇಳಿದರು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು, ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ ಇವರ ಆಶ್ರಯದಲ್ಲಿ ಅಕ್ಟೋಬರ್ 8ರಂದು ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ನ್ಯಾಯಾಧೀಶರಿಗೆ ಹಮ್ಮಿಕೊಂಡಿದ್ದ ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತ ಸಂಸ್ಥೆ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಪಾತ್ರ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಉಪ ಲೋಕಯುಕ್ತರಾದ ಕೆ.ಎನ್.ಫಣೀಂದ್ರ ಅವರು ರಾಜ್ಯಾದ್ಯಂತ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಸುತ್ತಿರುವ ಈ ಸಾರ್ವಜನಿಕ ಅಹವಾಲು ಸ್ವೀಕಾರ ಮತ್ತು ವಿಚಾರಣೆಯು ನವನವೀನ ಮತ್ತು ಅತ್ಯಂತ ಉಪಯುಕ್ತವಾದ ಕಾರ್ಯಕ್ರಮವಾಗಿದೆ. ಲೋಕಾಯುಕ್ತ ಸಂಸ್ಥೆ ಏನು ಕೆಲಸ ಮಾಡುತ್ತಿದೆ. ಕುಂದುಕೊರತೆಗೆ ಸಿಗಬಹುದಾದ ಪರಿಹಾರ ಏನು ಎಂಬುದರ ಬಗ್ಗೆ ಲೋಕಾಯುಕ್ತ ಸಂಸ್ಥೆಯು ಹಮ್ಮಿಕೊಳ್ಳುತ್ತಿರುವ ಕಾರ್ಯಕ್ರಮದಿಂದಾಗಿ ಸಾರ್ವಜನಿಕರಿಗೆ ಅನುಕೂಲವಾಗುತ್ತಿದೆ. ಈ ರೀತಿ ಕಾರ್ಯಕ್ರಮ ಹಮ್ಮಿಕೊಂಡದಲ್ಲಿ ಸಂಸ್ಥೆ ಮತ್ತು ಸಾರ್ವಜನಿಕರ ಮಧ್ಯೆ ಅಂತರ ಕಡಿಮೆ ಆಗುತ್ತದೆ ಎಂದು ತಿಳಿಸಿದರು.
ಪ್ರತಿಯೊಬ್ಬ ನ್ಯಾಯಾಧೀಶರು ನಾನು ಮೊದಲು ದೇಶದ ಸತ್ಪçಜೆ, ಬಳಿಕ ನ್ಯಾಯಾಧೀಶ ಎಂಬುದಾಗಿ ಅರಿತುಕೊಳ್ಳಬೇಕು. ಶ್ರೀಸಾಮಾನ್ಯನಿಗೆ ನಮ್ಮಿಂದ ಏನು ಸಹಾಯ ಮಾಡಬಹುದು ಎಂದು ಯೋಚಿಸಿ ನ್ಯಾಯಾಧೀಶರು ಕೆಲಸ ಮಾಡಬೇಕು. ಲೋಕಾಯುಕ್ತದ ಜತೆಗೆ ಕೈಜೋಡಿಸಿ ನ್ಯಾಯಾಧೀಶರು ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ಗೌರವಾನ್ವಿತ ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ, ಕರ್ನಾಟಕ ಲೋಕಾಯುಕ್ತ ಬೆಂಗಳೂರಿನ ವಿಚಾರಣೆಯ ಉಪ ನಿಬಂಧಕರಾದ ಎಂ.ವಿ.ಚನ್ನಕೇಶವ ರೆಡ್ಡಿ, ಹೆಚ್ಚುವರಿ ನಿಬಂಧಕರಾದ ಸುದೇಶ ರಾಜಾರಾಂ ಪರದೇಶಿ, ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿಗಳಾದ ಕಿರಣ್ ಪ್ರಹ್ಲಾದ್‌ರಾವ್ ಮುತಾಲಿಕ್ ಪಾಟೀಲ, ಕರ್ನಾಟಕ ಲೋಕಾಯುಕ್ತ ರಾಯಚೂರಿನ ಪೊಲೀಸ್ ಅಧೀಕ್ಷಕರಾದ ಡಾ.ರಾಮ್ ಲಕ್ಷ್ಮಣ
ಣ ಅರಸಿದ್ದಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೇವೇಂದ್ರ ಪಂಡಿತ, ಕೊಪ್ಪಳ ಲೋಕಾಯುಕ್ತ ಕಚೇರಿಯ ಉಪಾಧೀಕ್ಷಕರಾದ ಸಲಿಂ ಪಾಶಾ ಹಾಗೂ ಇನ್ನೀತರರು ಇದ್ದರು.