Breaking News

ಅಂಚೆ ಜನಸಂಪರ್ಕ ಅಭಿಯಾನ ಕಾರ್ಯಕ್ರಮ ನಾಳೆ

Postal Public Relations Program tomorrow

ಜಾಹೀರಾತು

ಕೊಪ್ಪಳ ಅಕ್ಟೋಬರ್ 10 (ಕ.ವಾ.) : ಭಾರತೀಯ ಅಂಚೆ ಇಲಾಖೆ ಗದಗ ವಿಭಾಗದಿಂದ ಡಾಕ್ ಕಮ್ಯುನಿಟಿ ಡೆವಲೆಪ್ಮೆಂಟ್ ಪ್ರೋಗ್ರಾಮ ಅಡಿಯಲ್ಲಿ ಅಂಚೆ ಜನಸಂಪರ್ಕ ಅಭಿಯಾನ ಕಾರ್ಯಕ್ರಮವನ್ನು ಅಕ್ಟೋಬರ್ 12ರಂದು ಬೆಳಿಗ್ಗೆ 10.30ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಏರ್ಪಡಿಸಲಾಗಿದೆ.
ಕೊಪ್ಪಳ ಸಂಸದರಾದ ಸಂಗಣ್ಣ ಕರಡಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕೊಪ್ಪಳ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ್, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಶಿವಗಂಗಾ
ಎಸ್ ಭೂಮಕ್ಕನವರ್, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಬಿ.ಕೆ.ರವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋದಾ ವಂಟಗೋಡಿ, ಕೊಪ್ಪಳ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರಾದ ಕೃಷ್ಣ ಉಕ್ಕುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ತಿಪ್ಪಣ್ಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಗವಿಸಿದ್ದಪ್ಪ ಹೊಸಮನಿ ಅವರು ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ
ಅಂಚೆ ಇಲಾಖೆ ಗದಗ ವಿಭಾಗದ ಮೇಲ್ವಿಚಾರಕರಾದ ಎನ್.ಜಿ ಭಂಗಿಗೌಡರು, ಕೊಪ್ಪಳ ಅಂಚೆ ನಿರೀಕ್ಷಕರಾದ ಮಹಾಂತೇಶ ತೊಗರಿ, ಪೋಸ್ಟ್‌ಮಾಸ್ಟರ್ ಭೀಮಸೇನ ಎ.ಜೆ ಹಾಗೂ ಕೊಪ್ಪಳ ಪ್ರಧಾನ ಅಂಚೆ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

About Mallikarjun

Check Also

ಒಕ್ಕೂಟದ ನೂತನ ನಿರ್ದೇಶಕರಿಂದ ಪ್ರತ್ಯಂಗಿರಾ ದೇವಿಯ ದರ್ಶನ

New director of the union visits Pratyangira Devi ಗಂಗಾವತಿ: ರಾಯಚೂರು ಬಳ್ಳಾರಿ ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಯ …

Leave a Reply

Your email address will not be published. Required fields are marked *