Breaking News

ಕಿರುಸಾಲಯೋಜನೆಯಡಿಬೀದಿಬದಿವ್ಯಾಪಾರಿಗಳಿಂದ ಅರ್ಜಿ ಆಹ್ವಾನ

Application invited from street vendors for micro loan scheme

ಜಾಹೀರಾತು

ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವಂತಹ ಬೀದಿಬದಿ ವ್ಯಾಪಾರಿಗಳಿಗೆ ಕಿರುಸಾಲ ಯೋಜನೆಯಡಿ ಬ್ಯಾಂಕಿನ ಮುಖಾಂತರ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯ ಕೊಪ್ಪಳ, ಗಂಗಾವತಿ, ಕುಷ್ಟಗಿ, ಕಾರಟಗಿ, ಯಲಬುರ್ಗಾ, ಕನಕಗಿರಿ, ತಾವರಗೇರಾ, ಕುಕನೂರು ಮತ್ತು ಭಾಗ್ಯನಗರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವಂತಹ ಹಾಲು ಮಾರಾಟ ಮತ್ತು ಹಂಚಿಕೆ ಮಾಡುವವರು, ದಿನ ಪತ್ರಿಕೆ ಹಂಚಿಕೆ ಮಾಡುವವರು, ಟೈಲರಿಂಗ್ ವೃತ್ತಿಯಲ್ಲಿ ತೊಡಗಿರುವವರು, ದೋಬಿ ಮತ್ತು ಇಸ್ತಿç ಸೇವೆ, ಹಳೆ ಪಾತ್ರೆಗಳನ್ನು ವ್ಯಾಪಾರ ಮಾಡುವವರು, ಬಡಗಿ, ಚಮ್ಮಾರರು, ನೇಯ್ಗೆಗಾರರು, ಎಳೆ ನೀರು ಮಾರಾಟಗಾರರು, ಆಹಾರ ತಯಾರಿಸಿ ಮಾರಾಟ ಮಾಡುವವರಿಗೆ ಪ್ರಧಾನಮಂತ್ರಿ ಆತ್ಮನಿರ್ಭರ್ (ಪಿ.ಎಮ್. ಸ್ವ-ನಿಧಿ) ಬೀದಿಬದಿ ವ್ಯಾಪಾರಿಗಳಿಗೆ ಕಿರುಸಾಲ ಯೋಜನೆಯಡಿ ಬ್ಯಾಂಕಿನ ಮುಖಾಂತರ ಸಾಲ ಸೌಲಭ್ಯ ಒದಗಿಸಲಾಗುತ್ತದೆ.
ಮೇಲ್ಕಂಡ ವೃತ್ತಿಗಳಲ್ಲಿ ತೊಡಗಿರುವವರು ಸಾಲ ಸೌಲಭ್ಯಕ್ಕಾಗಿ ನಗರ ಸ್ಥಳೀಯ ಸಂಸ್ಥೆಯ ಡೇ-ನಲ್ಮ್ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ಯೋಜನೆಯಡಿ 15 ದಿನಗಳೊಳಗಾಗಿ ಅರ್ಜಿ ಸಲ್ಲಿಸಿ, ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಾಣೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಹದಿನೈದು ದಿನವಾದರೂ ಬರದ ಕಸ ವಿಲೇವಾರಿ ವಾಹನ,,! ಸಾರ್ವಜನಿಕರ ಗೋಳು ಕೇಳುವವರು ಯಾರು ??

The garbage disposal vehicle hasn't arrived for fifteen days! Who listens to the public's complaints? …

Leave a Reply

Your email address will not be published. Required fields are marked *