Dussehra poetry celebration on A.15
ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಕೊಪ್ಪಳ ವಿಶ್ವವಿದ್ಯಾಲಯ ವತಿಯಿಂದ ಕೊಪ್ಪಳ ಜಿಲ್ಲಾ ರಜತ ಮಹೋತ್ಸವ ಅಂಗವಾಗಿ ಅಕ್ಟೋಬರ್ 15 ರಂದು ಬೆಳಿಗ್ಗೆ 10.00 ಗಂಟೆಗೆ ಕೊಪ್ಪಳ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದಸರಾ ಕಾವ್ಯ ಸಂಭ್ರಮ-2023 ಕಾರ್ಯಕ್ರಮವನ್ನು ಏರ್ಪಡಿಸಿದೆ.
ಕಾರ್ಯಕ್ರಮವನ್ನು ಹಂಪಿ, ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಡಿ.ವಿ. ಪರಮಶಿವಮೂರ್ತಿಯವರು ಉದ್ಘಾಟಿಸಲಿದ್ದಾರೆ. ನಂತರದಲ್ಲಿ ಕವಿಗೋಷ್ಠಿಗಳು ನಡೆಯಲಿದ್ದು, ಕವಿಗೋಷ್ಠಿ-1 ರ ಅಧ್ಯಕ್ಷತೆಯನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಟಿ.ಎಂ. ಭಾಸ್ಕರ್ ಅವರು ವಹಿಸುವರು. ಕವಿಗೋಷ್ಠಿ-2ರ ಅಧ್ಯಕ್ಷತೆಯನ್ನು ಬೆಂಗಳೂರು ದೂರದರ್ಶನ ಕೇಂದ್ರದ ನಿರ್ದೇಶಕರಾದ ಡಾ. ನಿರ್ಮಲಾ ಎಲಿಗಾರ ಐ.ಬಿ.ಪಿ.ಎಸ್., ಇವರು ವಹಿಸುವರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕೊಪ್ಪಳ ಜನದನಿ ಪ್ರಕಾಶನದ ಪ್ರಕಾಶಕಿ ಸಾವಿತ್ರಿ ಮುಜಮದಾರ ಹಾಗೂ ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ತಿಮ್ಮಾರೆಡ್ಡಿ ಮೇಟಿ ಇವರುಗಳು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ. ರವಿ ಅವರು ವಹಿಸುವರು ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…