Breaking News

ಕರ್ನಾಟಕ ಡಿ.ಎಸ್.ಟಿ-ಪಿಹೆಚ್.ಡಿಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

Karnataka D.S.T.-Ph. Discipline Salary ApplicationInvitation

ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ವಿಜ್ಞಾನ ಮತ್ತು ಇಂಜಿನಿಯರಿAಗ್‌ನಲ್ಲಿ ಪಿಹೆಚ್.ಡಿ ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿ-ಪಿ.ಹೆಚ್.ಡಿ ಶಿಷ್ಯವೇತನಕ್ಕಾಗಿ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ವಿಜ್ಞಾನ ಮತ್ತು ಇಂಜಿನಿಯರಿAಗ್‌ನಲ್ಲಿ ಪಿಹೆಚ್.ಡಿ ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿ-ಪಿ.ಹೆಚ್.ಡಿ ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಅನುಷ್ಠಾನಗೊಳಿಸುತ್ತಿದೆ. 2023-24 ನೇ ಸಾಲಿನಲ್ಲಿ ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿAಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆ/ಕಾಲೇಜುಗಳಲ್ಲಿ ಈಗಾಗಲೇ ಪಿಹೆಚ್.ಡಿ ಪದವಿಗೆ ನೋಂದಾಯಿತವಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು http://ksteps.karnataka.gov.in ಜಾಲತಾಣಕ್ಕೆ ಭೇಟಿ ನೀಡಬಹುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರು(ತಾಂತ್ರಿಕ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಕಿರುಕುಳ ತಪ್ಪಿಸಿ..!

12೦೦ ಗ್ರಾಹಕರಿಗೆ ಜೀವ ಭದ್ರತೆ ಒದಗಿಸಬೇಕೆಂದು ರಕ್ಷಣಾ ವೇದಿಕೆ ಮನವಿ: ಗಂಗಾವತಿ: 2018ನೇ ಸಾಲಿನಲ್ಲಿ lಗಂಗಾವತಿ ತಾಲೂಕು ಕರ್ನಾಟಕ ಗ್ರಾಮೀಣ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.