Breaking News

ಅ.17 ರಂದು ಉದ್ಯೋಗ ಮೇಳ

Job fair on A.17

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಅಕ್ಟೋಬರ್ 17 ರಂದು ಬೆಳಿಗ್ಗೆ 10.30 ರಿಂದ 2.00 ಗಂಟೆಯವರೆಗೆ ಗಂಗಾವತಿಯ ಸರ್ಕಾರಿ ಇಂಜಿನೀಯರಿಂಗ್ ಕಾಲೇಜ್‌ನಲ್ಲಿ ಜಾಬ್‌ಫೇರ್ ಆಯೋಜಿಸಲಾಗಿದೆ.
ಈ ಜಾಬ್‌ಫೇರ್‌ನಲ್ಲಿ ನೆಕ್ಸ್ಸ್ ಇಂಡಿಯಾ ಮೈಸೂರು, ಸ್ವಮಾನ್ ಫೈನಾನ್ಸ್ ಗಂಗಾವತಿ, ಅಡ್ಯಾಕೊ ಕೋಲಾರ ಇವರು ಭಾಗವಹಿಸಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಅಭ್ಯರ್ಥಿಗಳಿಗೆ ಉಚಿತ ಪ್ರವೇಶವಿರುತ್ತದೆ. ಪಿಯುಸಿ/ತತ್ಸಮಾನ, ಐಟಿಐ, ಯಾವುದೇ ಪದವಿ, ಡಿಪ್ಲೋಮಾ ಸಿವಿಲ್, ಮೆಕ್ಯಾನಿಕಲ್, ಬಿಇ ಸಿವಿಲ್, ಮೆಕ್ಯಾನಿಕಲ್ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
18 ರಿಂದ 28 ವರ್ಷದವರೆಗಿನ ಅರ್ಹ ವಿದ್ಯಾರ್ಹತೆ ಹೊಂದಿದ ಯುವಕ ಮತ್ತು ಯುವತಿಯರು, ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಜಾಬ್‌ಫೇರ್‌ನಲ್ಲಿ ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ, ಮೊ.ಸಂ: 8105693234 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *