ಕಲ್ಯಾಣಸಿರಿ ವಿಶೇಷ

ಇಂದಿನಿಂದ ವಾರ್ತಾ ಇಲಾಖೆಯ ಜನಜಾಗೃತಿ ಕಾರ್ಯಕ್ರಮ

Public awareness program of news department from today

ಕೊಪ್ಪಳ ಅಕ್ಟೋಬರ್ 16 (ಕ.ವಾ.): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೊಪ್ಪಳ ಇವರಿಂದ ಸರ್ಕಾರದ ವಿವಿಧ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಅಕ್ಟೋಬರ್ 17 ರಿಂದ ಅಕ್ಟೋಬರ್ 29ರವರೆಗೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ವಾರ್ತಾಧಿಕಾರಿಗಳಾದ ಗವಿಸಿದ್ದಪ್ಪ ಹೊಸಮನಿ ಅವರು ತಿಳಿಸಿದ್ದಾರೆ.
ಕೊಪ್ಪಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹತ್ತು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಅಕ್ಟೋಬರ್ 17ರಂದು ಕನಕಪುರ ಮತ್ತು ಹಾಲವರ್ತಿ, ಅಕ್ಟೋಬರ್ 18ರಂದು ಲೇಬಗೇರಿ ಮತ್ತು ಕಲಕೇರಿ, ಅಕ್ಟೋಬರ್ 19ರಂದು ಗಬ್ಬೂರ ಮತ್ತು ಬೇವಿನಹಳ್ಳಿ, ಅಕ್ಟೋಬರ್ 20ರಂದು ಕಂಪಸಾಗರ ಮತ್ತು ಮುನಿರಾಬಾದ್, ಅಕ್ಟೋಬರ್ 21ರಂದು ಮಾದಿನೂರು ಮತ್ತು ಕೋಳೂರ, ಅಕ್ಟೋಬರ್ 25ರಂದು ಅಳವಂಡಿ ಮತ್ತು ಕವಲೂರ, ಅಕ್ಟೋಬರ್ 26ರಂದು ಬೂದಿಹಾಳ ಮತ್ತು ಹಲಗೇರಿ, ಅಕ್ಟೋಬರ್ 27ರಂದು ಹಟ್ಟಿ ಮತ್ತು ಬಿಸರಳ್ಳಿ, ಅಕ್ಟೋಬರ್ 28ರಂದು ಇರಕಲಗಡ ಮತ್ತು ಒನಬಳ್ಳಾರಿ ಹಾಗೂ ಅಕ್ಟೋಬರ್ 29ರಂದು ಹಾಸಗಲ್ ಮತ್ತು ಚಿಕ್ಕಬೊಮ್ಮನಾಳ ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮಗಳು ನಡೆಯಲಿವೆ.
ಕುಷ್ಟಗಿ ತಾಲೂಕಿನ ಜನಜಾಗೃತಿ ಕಲಾ ರಂಘ ಸಂಸ್ಥೆಯ ನುರಿತ ಕಲಾವಿದರಿಂದ ಈ ಕಾರ್ಯಕ್ರಮ ನಡೆಯಲಿದ್ದು ಆಯಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇನ್ನೀತರ ಅಧಿಕಾರಿಗಳು ಮತ್ತು ಆಯಾ ಗ್ರಾಮಸ್ಥರು ಕಾರ್ಯಕ್ರಮಕ್ಕೆ ಅಗತ್ಯ ಸಹಕಾರ ನೀಡಲು ಜಿಲ್ಲಾ ವಾರ್ತಾಧಿಕಾರಿಗಳು ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago