District level meeting of Mr. Valmiki for the city today
ಕೊಪ್ಪಳ: ನಗರದ ಹಳೆ ಜಿಲ್ಲಾ ಆಸ್ಪತ್ರೆ ಹಿಂದುಗಡೆ ಇರುವ ವಾಲ್ಮೀಕಿ ಭವನದಲ್ಲಿ ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳು ಆಗಮಿಸಿ ಜಿಲ್ಲಾಮಟ್ಟದ ಸಮುದಾಯದ ವಿಶೇಷ ಸಭೆಯನ್ನು ಅಕ್ಡೋಬರ್ 18 ಬೆಳಿಗ್ಗೆ 10.30 ಕ್ಕೆ ನಡೆಸುವರು ಎಂದು ಸಮಾಜದ ಯುವ ಮುಖಂಡ ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾಧ್ಯಕ್ಷ ಟಿ. ರತ್ನಾಕರ ಅವರು ವಹಿಸಲಿದ್ದಾರೆ, ಸಭೆಯಲ್ಲಿ ಗುರುಪೀಠದ ಜಿಲ್ಲಾ ಧರ್ಮದರ್ಶಿ ರಾಮಣ್ಣ ಕಲ್ಲನವರ್, ತಾಲೂಕ ಅಧ್ಯಕ್ಷ ಶರಣಪ್ಪ ನಾಯಕ, ರಾಜ್ಯ ಕಾರ್ಯದರ್ಶಿ ಸುರೇಶ್ ಡೊಣ್ಣಿ ಸೇರಿದಂತೆ ಜಿಲ್ಲೆಯ ಅನೇಕ ಮುಖಂಡರು ಪಾಲ್ಗೊಳ್ಳುವರು. ಸದರಿ ಸಭೆಯು ಅತ್ಯಂತ ಮಹತ್ವದ್ದಾಗಿದ್ದು, ಇತ್ತೀಚೆಗೆ ಸಮಾಜದಲ್ಲಿ ಬಿರುಕು ಮೂಡಿಸುವ ಹಾಗೆ ಮಠದ ಬಗ್ಗೆ ಮತ್ತು ಶ್ರೀಗಳ ಬಗ್ಗೆ ಅಪಸ್ವರದ ಮಾತುಗಳು ಬರುತ್ತಿದ್ದು, ಈಚೆಗೆ ರಾಜ್ಯಮಟ್ಟದ ಸಭೆಯಲ್ಲಿ ಅದರ ಕುರಿತು ಮನವರಿಕೆ ಮಾಡಲಾಗಿದ್ದು, ಜಿಲ್ಲಾ ಹಂತದಲ್ಲೂ ಅಂತಹ ಕೆಲಸ ಮಾಡಲಾಗುತ್ತಿದೆ. ಸಮಾಜದವರಿಗೆ ಇರುವ ಎಲ್ಲಾ ರೀತಿಯ ಅನುಮಾನಗಳಿಗೆ ಉತ್ತರಿಸುವ ಜೊತೆಗೆ ಜಿಲ್ಲೆಯಲ್ಲಿ ಸಮಾಜದ ಸಂಘಟನೆ ಕುರಿತಾದ ಹಾಗೂ ಸಮುದಾಯದ ಜನಗಳಿಗೆ ಆಗುತ್ತಿರುವ ತೊಂದರೆ ಸರಿಪಡಿಸುವ ನಿಟ್ಟಿನಲ್ಲಿ ಸಭೆಯಲ್ಲಿ ಸುಧೀರ್ಘ ಚರ್ಚೆ ಮಾಡುವರು. ಸಭೆಯ ನಂತರ ಜಿಲ್ಲಾ ಕೇಂದ್ರದಲ್ಲಿ ಇರುವ ಪರಿಶಿಷ್ಡ ಪಂಗಡದ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರರವರಿಗೆ ವರದಿ ಮಾಡುವ ಉದ್ದೇಶ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…