From Hanur Taluk administration, everyone should adopt Maharshi Valmiki’s principles and ideals: Ruler MR Manjunath.
ವರದಿ :ಬಂಗಾರಪ್ಪ ಸಿ ಹನೂರು.
ಹನೂರು: ಆದಿಕವಿ ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು,ನಮ್ಮ ನಾಡಿನನಲ್ಲಿ ಅನೇಕ ಮಹನೀಯರು ಜನ್ಮತಾಳಿದ್ದಾರೆ ಇಂತಹ ಪುಣ್ಯಸ್ಥಳದಲ್ಲಿ ಹುಟ್ಟಿರುವುದೆ ನಮ್ಮ ಪುಣ್ಯವಾಗಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಮುಂಭಾಗದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು ವಾಲ್ಮೀಕಿ ಮಹರ್ಷಿ ಬರೆದ ರಾಮಾಯಣ ದೇಶ- ವಿದೇಶಗಳಲ್ಲಿ ವಿಶ್ವ ವಿಖ್ಯಾತಿ ಆಗಿದೆ. ಪ್ರಸ್ತುತ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ವಿಶೇಷತೆಯಿಂದ ಕೂಡಿದ್ದು, ಇವರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಪಾಲಿಸಿಕೊಂಡಲ್ಲಿ ಅವರ ಜೀವನ ಉತ್ತಮವಾಗಿರುತ್ತದೆ.
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ವೈಕೆ ಗುರುಪ್ರಸಾದ್, ಎಎಸ್‌ಐ ಶಿವಕುಮಾರ್. ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು, ಪಟ್ಟಣ ಪಂಚಾಯಿತಿ ಸದಸ್ಯರುಗಳು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಮೂರ್ತಿ, ಸಿಡಿಪಿಒ ನಂಜಮಣಿ, ತಾಲೂಕು ಪಂಚಾಯಿತಿ ಇಒ ಉಮೇಶ್, ಪಶುವೈದ್ಯಾಧಿಕಾರಿ ಡಾ ಸಿದ್ದರಾಜು ಎಇಇ ಶಂಕರ್ ಇನ್ನಿತರರು ಹಾಜರಿದ್ದರು.