Breaking News

ಮಾನಸ ಶಿಕ್ಷಣ ಸಂಸ್ಥೆಯಲ್ಲಿಅದ್ದೂರಿಯಾಗಿ ನಡೆದ ವಾಲ್ಮೀಕಿ ಜಯಂತಿ

Valmiki Jayanti was celebrated in Manasa Education Institute.

ಜಾಹೀರಾತು


ವರದಿ : ಬಂಗಾರಪ್ಪ ಸಿ ಹನೂರು .
ಹನೂರು /ಕೊಳ್ಳೇಗಾಲ :ಜಿಲ್ಲೆಯ ಹೆಸರಾಂತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮಾನಸ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಎಸ್. ದತ್ತೇಶ್ ಕುಮಾರ್ ಚಾಲನೆ ನೀಡಿದರು . ನಂತರ ಮಹರ್ಷಿ ವಾಲ್ಮೀಕಿ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿ ಮಾತನಾಡಿದ ಅವರು ಅವರ ಆದರ್ಶಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದರು ಇದೇ ಸಂದರ್ಭದಲ್ಲಿ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಯಳಂದೂರಿನ ಬಿಳಿಗಿರಿ ಪದವಿ ಕಾಲೇಜಿನ ಉಪನ್ಯಾಸಕರಾದ ಶ್ರೀನಿವಾಸ್, ಸಂಸ್ಥೆಯ ಪ್ರಾಂಶುಪಾಲರುಗಳಾದ ಶ್ರೀ ಎಂ. ಚನ್ನಶೆಟ್ಟಿ ,ಶ್ರೀ ಡಿ. ಧನಂಜಯ್, ಶ್ರೀ ಡಿ. ಕೃಷ್ಣೇಗೌಡ. ಶ್ರೀಮತಿ ಮಂಗಳ, ಮುಖ್ಯೋಪಾಧ್ಯರಾದ ಶ್ರೀ ಶಂಕರ್ ರವರು ಭಾಗವಹಿಸಿದ್ದರು.
ಶ್ರೀ ವಾಲ್ಮೀಕಿ ಜಯಂತಿ ಪ್ರಯುಕ್ತ ಇದೇ ದಿನ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೆರವಣಿಗೆ ಕಾರ್ಯಕ್ರಮದಲ್ಲಿ ಶಾಸಕರು ಗಳಾದ ಎ ಆರ್ ಕೃಷ್ಣಮೂರ್ತಿ . ಎಮ್ ಆರ್ ಮಂಜುನಾಥ್ . ಮಾಜಿ ಶಾಸಕರುಗಳಾದ ಆರ್ ನರೇಂದ್ರ , ಜಿ ಎನ್ ಎನ್ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಡಾ. ಎಸ್ ದತ್ತೇಶ್ ಕುಮಾರ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

About Mallikarjun

Check Also

ಚಾಮರಾಜಪೇಟೆ ಚಂದ್ರ ಸ್ಪಿನಿಂಗ್ ಎಂಡ್ ವಿವಿಂಗ್ ಮಿಲ್ಸ್ ಜಾಗದ ಭೂ ಸ್ವಾಧೀನಕ್ಕೆ ಕರ್ನಾಟಕ ಸರ್ಕಾರ ಹೊರಡಿಸಿದಅಧಿಸೂಚನೆ ರದ್ದುಗೊಳಿಸಿ ಹೈಕೋರ್ಟ್ ತೀರ್ಪು*

High Court verdict quashes Karnataka government’s notification for land acquisition of Chandra Spinning and Weaving …

Leave a Reply

Your email address will not be published. Required fields are marked *