Police service is needed for the good of the nation: Police Inspector.

ವರದಿ:ಬಂಗಾರಪ್ಪ ಸಿ ಹನೂರು .
ಹನೂರು :ಪ್ರತಿಯೊಬ್ಬ ಅಧಿಕಾರಿಗಳು ಸಹ ರಾಷ್ಟ್ರದ ಆಂತರಿಕ ಭದ್ರತೆಯನ್ನು ಕಾಪಾಡಲು ನಮ್ಮ ಸಿಬ್ಬಂದಿ ವರ್ಗದವರು ಖಾತ್ರಿಪಡಿಸಬೇಕಾಗಿದೆ ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಧಾ ತಿಳಿಸಿದರು.
ಹನೂರು ತಾಲೂಕಿನ ರಾಮಾಪುರ ಪೊಲೀಸ್ ಠಾಣೆಯಲ್ಲಿ ಇಂದು ನಡೆದ ರಾಷ್ಟ್ರೀಯ ಐಕತ ದಿವಸದ ಪ್ರಯುಕ್ತ ಸಮಗ್ರ ಭದ್ರತೆ ಏಕೀಕರಣದ ಸ್ಪೂರ್ತಿಯನ್ನು ಕಾಪಾಡುವಂತೆ ಪ್ರತಿಜ್ಞಾವಿಧಿ ಬೋಧನೆ ಮಾಡಿ ನಂತರ ಮಾತನಾಡಿದ ಅವರು
ರಾಷ್ಟ್ರೀಯ ಭದ್ರತೆಗೆ ಸರ್ದಾರ್ ವಲ್ಲಬಾಯ್ ಪಟೇಲರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆಯಿಂದ ಸಾಧಿಸಿದ ರಾಷ್ಟ್ರೀಯ ಏಕೀಕರಣದ ಸ್ಪೂರ್ತಿಯನ್ನು ಪ್ರತಿಯೊಬ್ಬ ನಾಗರಿಕನಿಗೆ ಮತ್ತು ರಾಷ್ಟ್ರದ ಆಂತರಿಕ ಭದ್ರತೆಯನ್ನು ಖಾತ್ರಿಪಡಿಸಲು ರಾಷ್ಟ್ರದ ಐಕ್ಯತೆ ಸಮಗ್ರತೆ ಭದ್ರತೆಯನ್ನು ಕಾಪಾಡಲು ಪ್ರತಿಯೊಬ್ಬ ಸಿಬ್ಬಂದಿಯು ಪ್ರತಿಜ್ಞಾವಿಧಿ ಬೋಧನೆ ಮಾಡಿ ರಾಷ್ಟ್ರದ ಆಂತರಿಕ ಭದ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿ ವರ್ಗದವರು ಸಹ ಆಂತರಿಕ ಭದ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ತಿಳಿಸಿದರು.
ಇದೇ ಸಮಯದಲ್ಲಿ
ಲೋಕೇಶ್ ಮತ್ತು ಮಹೇಂದ್ರ ನಾಗೇಂದ್ರ ಸಿಬ್ಬಂದಿ ವರ್ಗದವರು ಹಾಜರಿದ್ದರು.