Breaking News

ಕರ್ನಾಟಕ ರಾಜ್ಯ ನದಾಫ್ / ಪಿಂಜಾರ ಸಂಘ,31ನೇಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ರಾಜ್ಯ ಸಮಾವೇಶ- ಕಾಶಿಮ್ ಅಲಿ ಮುದ್ದಾ ಬಳ್ಳಿ,,

Karnataka State Nadaf / Pinjara Association, State Convention on the occasion of 31st Foundation Day,,, Kashim Ali Mudda Valli,

ಗಂಗಾವತಿ,1: ಕರ್ನಾಟಕ ರಾಜ್ಯ ನದಾಫ್ ಸಂಘ ರಿಜಿಸ್ಟರ್ ಆಡಳಿತ ಕಚೇರಿ ಚಿತ್ರದುರ್ಗ ಹಾಗೂ ಕೊಪ್ಪಳ ಜಿಲ್ಲಾ ಘಟಕದ ಸಹಯೋಗದಲ್ಲಿ ಸಂಘದ 31ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಕರ್ನಾಟಕದ 50ನೇ ಕರ್ನಾಟಕ ರಾಜ್ಯೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಇದೇ ದಿನಾಂಕ 4 ರಂದು ಗಂಗಾವತಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ರಾಜ್ಯ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ನದಾಫ್ ಪಿಂಜಾರ ಸಂಘದ ಜಿಲ್ಲಾಧ್ಯಕ್ಷ ಕಾಶಿಮ್ ಅಲಿ ಮುದ್ದ ಬಳ್ಳಿ ಹೇಳಿದರು, ಅವರು ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರಾಜ್ಯಮಟ್ಟದ ಸಮಾವೇಶ ಹಾಗೂ ಕರ್ನಾಟಕ ರಾಜ್ಯೋತ್ಸವದ 50ರ ದಿನೋತ್ಸವದ ಪ್ರಯುಕ್ತವಾಗಿ ಜೂನಿಯರ್ ಕಾಲೇಜ್ ಮೈದಾನದಲ್ಲಿ ಕರ್ನಾಟಕ ಏಕೀಕರಣದ ಹುತಾತ್ಮ ಪೈಲ್ವಾನ್ ಪಿಂಜಾರ ರಂಜಾನ್ ಸಾಬ್ ವೇದಿಕೆಯಲ್ಲಿ ಸಮಾವೇಶ ಜರುಗಲಿದ್ದು ಬೆಳಿಗ್ಗೆ 10:30 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಿಗಿ ಸಮಾರಂಭವನ್ನ ಉದ್ಘಾಟಿಸು ವರು ನದಾಫ್ / ಪಿಂಜಾರ ಲಾಂಛನ ಅನಾವರಣವನ್ನು ಶಾಸಕ ಜನಾರ್ದನ್ ರೆಡ್ಡಿ ನೆರವೇರಿ ಸು ವರು, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಅಲ್ಪಸಂಖ್ಯಾತರ ಕಲ್ಯಾಣ ವಸತಿ ಹಾಗೂ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್, ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದು ಅಧ್ಯಕ್ಷತೆಯನ್ನು ರಾಜ್ಯಾಧ್ಯಕ್ಷರಾದ ಜನಾ ಬ ಹೆಚ್ ಜಲೀಲ್ ಸಾಬ್ ವಹಿಸುವರು ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಕ್ರಮವಾಗಿ ಶೇಕಡಾ 95 ಹಾಗೂ ಶೇಕಡ 90ರಷ್ಟು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ಸಾಧಕರಿಗೆ ಸನ್ಮಾನ ನಡೆಸಲಾಗುವುದು ಸಮಾವೇಶದಲ್ಲಿ ಸಮಾಜಕ್ಕೆ ಅಗತ್ಯ ಇರುವ ವಿಷಯಗಳ ಕುರಿತು ಚಿಂತನ ಮಂಥನ ನಡೆಸಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು ಎಂದು ಸಮಗ್ರ ಮಾಹಿತಿ ನೀಡಿದರು , ತಾಲೂಕ ಅಧ್ಯಕ್ಷ ಟಿಪ್ಪು ಸುಲ್ತಾನ್ ಮಾತನಾಡಿ ಆರ್ಥಿಕವಾಗಿ ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಅತ್ಯಂತ ಹಿಂದುಳಿದ ಸಮಾಜವಾದ ನದಾಫ್ ಪಿಂಜಾರ ಸಮಾಜ ಸರ್ಕಾರಗಳು ನಮ್ಮನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ವಹಿಸಿದೆ ಈ ಹಿನ್ನೆಲೆಯಲ್ಲಿ ಸಮಾವೇಶದ ಮೂಲಕ ಪಿಂಜಾರ್ ನದಾಫ್ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಗೊಳ್ಳುವಂತೆ ಹಾಗೂ ಸೂಕ್ತ ರಾಜಕೀಯ ಸ್ಥಾನಮಾನ ಕಲ್ಪಿಸುವಂತೆ ಒತ್ತಾಯಿಸಲಾಗುವುದೆಂದು ಹೇಳಿದರು ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾಸಿನ್ ಸಾಬ್ ತಾಲೂಕ ಪ್ರಧಾನ ಕಾರ್ಯದರ್ಶಿ ಬಾಬುಸಾಬ್ ಡಿಶ್ ಜಿಲಾನಿ ಎನ್ಎಂ ರಫಿ ಕಾಶಿಮ್ ಸಾಬ್ ಸೋಮನಾಳ ಟೀ ಕಾಸಿಂ ಸಾಬ್ ಖಾದರ್ ಭಾಷಾ ಉಪಸ್ಥಿತರಿದ್ದರು

About Mallikarjun

Check Also

ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು, ದಂಡವಸೂಲಿ.

ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಬಿಜೆಪಿ ಮುಖಂಡ ಆಗಿರುವ ಮಹಿಬೂಬ್ ಸಾಬ್ ಮುಲ್ಲಾ (ಎಂ.ಡಿ.ಎಸ್) ತಂದೆ ಮೋದಿನ್ ಸಾಬ್ ಈತನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.