Breaking News

ಶ್ರೀ ಶೈಲ ಪಬ್ಲಿಕ್ ಸ್ಕೂಲ್ ನಲ್ಲಿ ಸಂಭ್ರಮದ ಹೆಸರಾಯಿತುಕರ್ನಾಟಕ-ಉಸಿರಾಗಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Karnataka-Usiragali Karnataka Rajyotsava celebration became the name of celebration at Sri Shaila Public School

ಗಂಗಾವತಿ,01: ನಗರದ ಶ್ರೀಶೈಲ ಪಬ್ಲಿಕ್ ಶಾಲೆಯಲ್ಲಿ ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವವನ್ನೂ ಆಚರಿಸಲಾಯಿತು.

1973 ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ ೫೦ ವಸಂತಗಳು ಸಂದಿರುವ ಪ್ರಯುಕ್ತ ಅತೀ ಸಂತಸ ಸಡಗರದಿಂದ ಆಚರಿಸಲಾಯಿತು. ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ, ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು ಇಂತಹ ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ಶಾಲಾ ಮುಖ್ಯೋಪಾಧ್ಯಾಯರಾದ ರೇಖಾ ಜೇಕಿನ್ ಗೌರವದಿಂದ ಸ್ಮರಿಸಿದರು.

ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನದ ಹಾಗೂ ಮನೆಯ ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಸಂಸ್ಥೆಯ ಅಧ್ಯಕ್ಷ ನಿರೂಪಾದಿಗೌಡ ಜೇಕಿನ್ ಅಭಿಪ್ರಾಯ ವ್ಯಕ್ತಪಡಿಸಿದರು.

ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು “ಹಸಿರಾಗಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ವಿದ್ಯಾರ್ಥಿ ಜ್ಞಾನ ಪೀಠ ಪ್ರಶಸ್ತಿ ಪಡೆದ ಕವಿಗಳ ವೇಷಭೂಷಣ ಧರಿಸಿ ಆಕರ್ಷಕವಾಗಿತ್ತು. ನಂತರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಮಾಡಿ ಪುಷ್ಪ ಹಾಕುವುದರ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ಹಾಗೆಯೇ ಕರ್ನಾಟಕ ಸರಕಾರ ಮತ್ತು ಶಿಕ್ಷಣ ಇಲಾಖೆ ಸೂಚಿಸಿದ ಹಾಡುಗಳನ್ನು ವಿದ್ಯಾರ್ಥಿಗಳಿಂದ ಹಾಡಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ರೇಖಾ ಜೇಕಿನ್,ಸಹ ಶಿಕ್ಷಕರಾದ ವಿರೂಪಮ್ಮ,ಅನಿತಾ,ಸುಶೀಲಾ, ಶಿಲ್ಪ,ಈರಮ್ಮ,ಸೇರಿದಂತೆ ಇತರರು ಇದ್ದರು

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.