Chief Minister is welcomed by MPs, Ministers, MLAs, District Administration at MSPL Aerodrome
ಕೊಪ್ಪಳ ನವೆಂಬರ್ 02 (ಕರ್ನಾಟಕ ವಾರ್ತೆ): ಕರ್ನಾಟಕ ಸಂಭ್ರಮ-50ರ ಹಿನ್ನೆಲೆಯ ಜ್ಯೋತಿ ರಥಯಾತ್ರೆಯ ಉದ್ಘಾಟನಾ ಸಮಾರಂಭಕ್ಕೆ ಹಂಪಿ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನವೆಂಬರ್ 2ರಂದು ಕೊಪ್ಪಳ ಜಿಲ್ಲೆಯ ಗಿಣಿಗೇರಾ ಹತ್ತಿರದ ಎಂಸಿಪಿಎಲ್ ಏರೋಡ್ರಮ್ ಮೂಲಕ ಹಂಪಿಯತ್ತ ಪ್ರಯಾಣ ಬೆಳೆಸಿದರು.
ಮಧ್ಯಾಹ್ನ ವೇಳೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಹತ್ತಿರದ ಎಂಎಸ್‌ಪಿಎಲ್ ಏರೋಡ್ರಮ್‌ಗೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಮತ್ತು ಬೆಂಗಳೂರಿನಿಂದ ಮುಖ್ಯಮಂತ್ರಿಗಳೊಂದಿಗೆ ಆಗಮಿಸಿದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರಿಗೆ ಸಂಸದರಾದ ಕರಡಿ ಸಂಗಣ್ಣ, ಸಚಿವರಾದ ಬಿ ನಾಗೇಂದ್ರ, ಜಮೀರ್ ಅಹ್ಮದ್ ಖಾನ್, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಶಾಸಕರಾದ ಹೇಮಲತಾ ನಾಯಕ, ಪ್ರಮುಖರಾದ ಅಮರೇಗೌಡ ಬಯ್ಯಾಪುರ, ರಾಜಶೇಖರ ಹಿಟ್ನಾಳ ಹಾಗೂ ಪಕ್ಷದ ಇನ್ನೀತರ ಪ್ರಮುಖರು ಸೇರಿದಂತೆ ಇತರರು ಹೂಗುಚ್ಛ ನೀಡಿ ಬರ ಮಾಡಿಕೊಂಡರು.
ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಐತಿಹಾಸಿಕ ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಲು ಮತ್ತು ವಿವಿಧೆಡೆ ನಾನಾ ಅಭಿವೃದ್ಧಿ ಕಾಮಗಾರಿಗಳ ಚಾಲನಾ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಕೊಪ್ಪಳ ಜಿಲ್ಲಾಡಳಿತದಿಂದ ಸಹ ಸ್ವಾಗತ ಕೋರಲಾಯಿತು.
ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಅವರು ಮುಖ್ಯಮಂತ್ರಿಗಳಿಗೆ ಹೂಗುಚ್ಛ ನೀಡಿ ಸ್ವಾಗತ ಕೋರಿದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ವಿ.ಎಸ್.ಉಗ್ರಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ, ಕೊಪ್ಪಳ ಜಿಲ್ಲಾ ಉಪ ವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಪೊಲೀಸ್ ಉಪಾಧೀಕ್ಷಕರಾದ ಶರಣಬಸಪ್ಪ ಸುಭೇದಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು. ಇದೆ ವೇಳೆ ಮುಖ್ಯಮಂತ್ರಿಗಳು ಕೊಪ್ಪಳ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.