Breaking News

ನ.05 ರಂದು ಕಾರಟಗಿ ನೂತನ ಬಸ್ ನಿಲ್ದಾಣ ಲೋಕಾರ್ಪಣೆಸಮಾರಂಭ

Inauguration ceremony of Karatagi new bus stand on November 05

ಕೊಪ್ಪಳ ನವೆಂಬರ್ 04 (ಕರ್ನಾಟಕ ವಾರ್ತೆ): ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದ ಕಾರಟಗಿಯ ನೂತನ ಬಸ್ ನಿಲ್ದಾಣ ಉದ್ಘಾಟನಾ/ಲೋಕಾರ್ಪಣೆ ಹಾಗೂ ಅಪಘಾತ/ಅಪರಾಧ ರಹಿತ ಚಾಲಕರಿಗೆ ಬೆಳ್ಳಿ ಪದಕ ವಿತರಣಾ ಸಮಾರಂಭವನ್ನು ನವೆಂಬರ್ 05 ರಂದು ಬೆಳಿಗ್ಗೆ 11 ಗಂಟೆಗೆ ಕಾರಟಗಿ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಸಂಗಪ್ಪ ತಂಗಡಗಿ ಅವರು ಉದ್ಘಾಟಿಸುವರು. ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರು ಹಾಗೂ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಅಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಸಂಗಣ್ಣ ಕರಡಿ, ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ, ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಕೊಪ್ಪಳ ಶಾಸಕರಾದ ರಾಘವೇಂದ್ರ ಹಿಟ್ನಾಳ್, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಶಾಸಕರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ, ಹೇಮಲತಾ ನಾಯಕ ಭಾಗವಹಿಸುವರು.
ಗೌರವಾನ್ವಿತ ಅತಿಥಿಗಳಾಗಿ ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ.ಎನ್.ವಿ.ಪ್ರಸಾದ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನ್‌ರಾಜ್, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ಸುನೀಲ ವಂಟಗೋಡಿ, ಕ.ಕ.ರ.ಸಾ.ನಿಗಮ, ಕಲಬುರಗಿಯ ವ್ಯವಸ್ಥಾಪಕ ನಿರ್ದೇಶಕರಾದ ಎಂ. ರಾಚಪ್ಪ ಅವರು ಆಗಮಿಸುವರು ಎಂದು ಕ.ಕ.ರ.ಸಾ.ನಿಗಮ ಕೊಪ್ಪಳದ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ವೆAಕಟೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

BJP ಸೋಲಿಸಿ ಭಾರತ ಉಳಿಸಿ-ಎಸ್.ಎಫ್.ಐ

ಹೊಸಪೇಟೆ: ಇಂದು ಭಾರತದಲ್ಲಿ ಪ್ರಜಾಪ್ರಭುತ್ವ ರಕ್ಷಣೆ ಮಾಡುವ ಸಂದರ್ಭದಲ್ಲಿ ನಾವಿದ್ದೇವೆ. ಇದಕ್ಕೆ ಬಹುಮುಖ್ಯ ಕಾರಣವೇ ಸಾರ್ವತ್ರಿಕ ಲೋಕಸಭಾ ಚುನಾವಣೆ ಆದ್ದರಿಂದ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.