Ashokaswamy Heroor urges MPs for Gangavati-Vijaypur railway
ಗಂಗಾವತಿ: ಗಂಗಾವತಿ-ವಿಜಯಪುರ ರೇಲ್ವೆ ಆರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಮಹಾ ಮಂಡಳದ ನಿರ್ದೇಶಕ ಅಶೋಕಸ್ವಾಮಿ ಹೇರೂರ,ಸಂಸದ ಕರಡಿ ಸಂಗಣ್ಣ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಸೊಲ್ಲಾಪುರ ಮತ್ತು ಮುಂಬೈ ರೇಲ್ವೆ ಸೌಲಭ್ಯದಿಂದ ಗಂಗಾವತಿ ಜನತೆ ವಂಚಿತರಾಗಿರುವುದರಿಂದ ಗಂಗಾವತಿ-ವಿಜಯಪುರ ರೇಲ್ವೆ ಪ್ರಾರಂಭಿಸಿ,ಈ ಭಾಗದ ಜನತೆಗೆ ಸೌಲಭ್ಯ ಒದಗಿಸಬೇಕೆಂದು ಕೋರಿದ್ದಾರೆ.
ಈ ಪತ್ರದ ಪ್ರತಿಯನ್ನು ನೈರುತ್ಯ ರೈಲ್ವೆ ವಲಯದ ಜನರಲ್ ಮ್ಯಾನೇಜರ್ ಅವರಿಗೂ ಕಳುಹಿಸಿ, ಅಧಿಕಾರಿಗಳಲ್ಲಿಯೂ ಈ ಬಗ್ಗೆ ಮನವಿ ಮಾಡಿದ್ದಾರೆ.
ಸಂಸದ ಸಂಗಣ್ಣ ಕರಡಿ ಮತ್ತು ರೇಲ್ವೆ ಇಲಾಖೆಯ ಅಧಿಕಾರಿಗಳು ತಮ್ಮ ಬೇಡಿಕೆಗೆ ಸ್ಪಂಧಿಸುತ್ತಾರೆ ಎಂಬ ಆಶಾ ಭಾವನೆಯನ್ನು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಅಶೋಕಸ್ವಾಮಿ ಹೇರೂರ ಆಶಾ ಭಾವನೆ ವ್ಯಕ್ತ ಪಡಿಸಿದ್ದಾರೆ.