JPM CEO visits Jangamar Kalgudi to inspect various works

ಗಂಗಾವತಿ ತಾಲೂಕಿನ ಜಂಗಮರ್ ಕಲ್ಗುಡಿ ಗ್ರಾಮ ಪಂಚಾಯತ್ ಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಸೋಮವಾರ ಬೆಳಗ್ಗೆ 8.30 ಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಗ್ರಾಮದ ಒಂದನೇ ವಾರ್ಡ್ ಗೆ ಜಿಪಂ ಸಿಇಓ ಅವರು ಭೇಟಿ ನೀಡಿ ಪ್ರಗತಿ ಹಂತದಲ್ಲಿ ಇರುವ ಚರಂಡಿ ಕಾಮಗಾರಿ, ಸ್ಮಶಾನದ ಸ್ಥಳ, ಆಸ್ಪತ್ರೆ, ಅಂಗನವಾಡಿ ಕೇಂದ್ರ, ಎನ್ ಆರ್ ಎಲ್ ಎಂ ಶೆಡ್ , ಜೆಜೆಎಂ ಕಾಮಗಾರಿ ಪರಿಶೀಲನೆ ನಡೆಸಿದರು, ಹಾಗೂ
ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ನಿರ್ಮಿಸಿಕೊಂಡ ವೈಯಕ್ತಿಕ ಶೌಚಾಲಯ ಬಳಕೆ, ಮತ್ತು ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕೆಲಸ ಕುರಿತು ಗ್ರಾಮಸ್ಥರೊಂದಿಗೆ ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ ಅವರು ಚರ್ಚಿಸಿದರು.
ಈ ವೇಳೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ, ಗ್ರಾ.ಕು.ನೀ & ನೈ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ವಿಜಯ ಕುಮಾರ,
ತಾಪಂ ಸಹಾಯಕ ನಿರ್ದೇಶಕರಾದ ಮಹಾಂತಗೌಡ ಪಾಟೀಲ್, ಗ್ರಾಪಂ ಅಧ್ಯಕ್ಷರಾದ ಶೃತಿ ಧನಂಜಯ, ಗ್ರಾಪಂ ಪಿಡಿಓ ರಾಮುನಾಯ್ಕ, ಗ್ರಾಪಂ ಕಾರ್ಯದರ್ಶಿ ಯಮನೂರಪ್ಪ, ನರೇಗಾ ತಾಂತ್ರಿಕ ಸಂಯೋಜಕರಾದ ಬಸವರಾಜ ಜಟಗಿ ಹಾಗೂ ಗ್ರಾಪಂ ಸದಸ್ಯರು ಇದ್ದರು.
Kalyanasiri Kannada News Live 24×7 | News Karnataka
