Appeal to the District Officers not to transfer the secretary of M. Betta Authority
ವರದಿ :ಬಂಗಾರಪ್ಪ ಸಿ ಹನೂರು .
ಹನೂರು:ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆ
ಸಮೀಪದ ಡ್ಯಾಮ್‌ನಲ್ಲಿ ಶ್ರೀ ಕ್ಷೇತ್ರ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳ ಗಮನಕ್ಕೆ ಬಾರದೆ ಕಾಮಗಾರಿ ನಡೆಸಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಅವರನ್ನು ವರ್ಗಾವಣೆ ಮಾಡದೆ ಮುಂದುವರಿಸ ಬೇಕೆಂದು ಕನ್ನಡ ಪರ ಹೋರಾಟಗಾರರು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ರವರಿಗೆ ಮನವಿ ಸಲ್ಲಿಸಿದರು. ಮಲೆಮಹದೇಶ್ವರ ಬೆಟ್ಟದ ಅಂತರಗಂಗೆ ಸಮೀಪದ
ಡ್ಯಾಮ್‌ನಲ್ಲಿ ಅಭಿವೃದ್ಧಿ ಕೆಲಸ ಮಾಡಲು ಯಾವುದೇ ಸಭೆಯಲ್ಲಿ ಅನುಮೋದನೆ ಪಡೆದುಕೊಂಡಿಲ್ಲ, ಇದಲ್ಲದೆ ಕಾರ್ಯದರ್ಶಿಗಳ ಗಮನಕ್ಕೂ ತಾರದೆ ಕಾಮಗಾರಿ ನಿರ್ವಹಿಸಿದ್ದಾರೆ. ಆದ್ದರಿಂದ ಪ್ರಾಧಿಕಾರದ ಕಾರ್ಯದರ್ಶಿಯವರು ಯಾವುದೇ ಕಾಮಗಾರಿಗಳಿಗೂ ಅನುಮತಿ ನೀಡುವವರೆಗೂ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡದಂತೆ ತಾವು ಸೂಕ್ತ ನಿರ್ದೆಶನ ನೀಡಬೇಕು, ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಗಮನಕ್ಕೆ ಬಾರದೆ ಕಾಮಗಾರಿ ನಡೆಸಿರುವವರ ವಿರುದ್ಧ ಉನ್ನತ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಸರಸ್ವತಿಯವರು ಪ್ರಾಧಿಕಾರದ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಮೂರು ತಿಂಗಳಲ್ಲೇ ಬೆಟ್ಟದಲ್ಲಿ ನಡೆಯುತ್ತಿದ್ದ ಆಕ್ರಮಗಳನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ನಿಷ್ಠಾವಂತ ಅಧಿಕಾರಿಯನ್ನು ಬೇರೆಡೆಗೆ ವರ್ಗಾವಣೆ ಮಾಡಿದರೆ ಮತ್ತೆ ಅಕ್ರಮಗಳು ತಲೆ ಎತ್ತುತ್ತವೆ. ಆದ್ದರಿಂದ ಪ್ರಾಧಿಕಾರದ ಕಾರ್ಯ ದರ್ಶಿಯಾದ ಸರಸ್ವತಿ ಅವರನ್ನು ವರ್ಗಾವಣೆ ಮಾಡದೆ ಮುಂದುವರಿಸಬೇಕು. ತಪ್ಪಿದಲ್ಲಿ ಜಿಲ್ಲೆಯಾದ್ಯಂತ ಕನ್ನಡ ಪರ ಹೋರಾಟಗಾರರ ಜೊತೆಗೂಡಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿ ಕನ್ನಡಪರ ಹೋರಾಟಗಾರರಾದ ನವೀನ್, ಮಂಜೇಶ್, ರವಿ, ಸಂಜಯ್ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.