Breaking News

ಉಚಿತ ನವೋದಯ ತರಬೇತಿಕಾರ್ಯಕ್ರಮವನ್ನು ಉದ್ಘಾಟಿಸಿ

Inaugurate a free Renaissance training programme

ಕನಕಗಿರಿ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ‌ ನೀಡಲಾಗುತ್ತಿದೆ ಪಾಲಕರು ತಮ್ಮ‌ ಮಕ್ಕಳಿಗೆ ಸರ್ಕಾರಿ ಶಾಲೆಗಳಿಗೆ ಕಳಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ರಾಮಚಂದ್ರಪ್ಪ ತಿಳಿಸಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ವತಿಯಿಂದ ಬುಧವಾರ ಆಯೋಜಿಸಿದ್ದ ಉಚಿತ ನವೋದಯ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಾಲ್ಲೂಕಿನ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ನವೋದಯ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಅದರ್ಶ ವಿದ್ಯಾಲಯದ ಪ್ರವೇಶ ಪಡೆಯಲು ಅನುಕೂಲವಾಗುವಂತೆ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ‌ ನೀಡುವ ಮೂಲಕ ಶಿಕ್ಷಕರ ಸಂಘದ ತಾಲ್ಲೂಕು ಘಟಕ ಸರ್ಕಾರಿ ಶಾಲೆಗಳ ಸಬಲೀಕರಣಗೊಳಿಸಲು‌ ಒತ್ತು ನೀಡಿರುವುದು ಶ್ಲಾಘನೀಯ ಎಂದರು.
ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷೆ ಶಂಶಾದಬೇಗ್ಂ ಮಾತನಾಡಿ ದಾನಿಗಳ ಸಹಕಾರ ಹಾಗೂ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ಈ ತರಬೇತಿ ನಡೆಸಿಕೊಂಡು ಬರುತ್ತಿದ್ದು ನೂರಾರು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಂಡಿದ್ದಾರೆ ಎಂದರು.
ಜೆಸ್ಕಾಂ ಎಂಜಿನಿಯರ್ ಅಮರೇಶ ರೆಡ್ಡಿ ಚಿತ್ರಕಿ,
ಅಕ್ಷರ ದಾಸೋಹ‌ ಇಲಾಖೆಯ ಸಹಾಯಕ‌ ನಿರ್ದೇಶಕ ಸುರೇಶಗೌಡ, ಸರ್ಕಾರಿ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಜಗದೀಶ ಹಾದಿಮನಿ ಅವರು ಮಾತನಾಡಿ ಶಿಕ್ಷಕರ ಸಂಘದ ಸೇವೆಯನ್ನು ಶ್ಲಾಘಿಸಿದರು .
ಕರ್ನಾಟಕ ರಾಜ್ಯ ಸರ್ಕಾರಿ‌ ನೌಕರರ ಸಂಘದ ರಾಜ್ಯ
ಪರಿಷತ್ ಸದಸ್ಯ ಡಿ.‌ಜಿ.‌ಸಂಗಮ್ಮನವರ್,
ಸಮೂಹ ಸಂಪನ್ಮೂಲ ವ್ಯಕ್ತಿ ಮಹೇಶ, ಶಿಕ್ಷಕರ ಸಂಘದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಮಲ್ಲಿಕಾರ್ಜುನ ಸಿರಿಗೇರಿ,
ಸಂಘದ ತಾಲ್ಲೂಕು ಉಪಾಧ್ಯಕ್ಷ ಶೇಖರ ನಾಯಕ್, ನಿರ್ದೇಶಕ ಟಿ.‌ಎಸ್. ಜಗದೀಶ ,
ಎಸ್ ಡಿಎಂಸಿ‌ ಮಾಜಿ ಸದಸ್ಯ ಪಾಮಣ್ಣ ಅರಳಿಗನೂರು,
ಮುಖ್ಯಶಿಕ್ಷಕರಾದ ಪರಸಪ್ಪ ಹೊರಪೇಟೆ, ಸುನೀತಾ ಪತ್ತಾರ, , ರವಿ ಸಜ್ಜನ್, ರಂಗಾರೆಡ್ಡಿ, ಹನುಮೇಶ, ಪಾಟೀಲ್, ಬಸಪ್ಪ ಇತರರು ಇದ್ದರು.

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.