Breaking News

ನಮ್ಮ ‘ಕನ್ನಡ’ಭಾಷೆಯು ಭಾರತದ ೨೨ ಅಧಿಕೃತ ಭಾಷೆಗಳಲ್ಲಿ ಒಂದಾಗಿದೆ ಎಂದು ಲೇಖಕಿ ಶಿವಮ್ಮ ತಿಳಿಸಿದರು.

Author Shivamma said that our ‘Kannada’ language is one of the 22 official languages ​​of India.

ಜಾಹೀರಾತು

ಚಾಮರಾಜನಗರ ತಾಲೂಕಿನ ಗೂಳೀಪುರದ ಶ್ರೀ ವಿ ಮಹಾಂತದೇವರು ಸರ್ಕಾರಿ ಪ್ರೌಡಶಾಲೆಯಲ್ಲಿ ಇಂದು ಜೆ ಎಸ್ ಬಿ ಪ್ರತಿಷ್ಠಾನ ಆಯೋಜಿಸಿದ್ದ ‘ಕನ್ನಡ ಮಾಸಾಚರಣೆ ೨೦೨೩’ ಕಾರ್ಯಕ್ರಮವನ್ನು ಕನ್ನಡತಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಭಾಷೆ ಎಂಬುವುದು ಕೇವಲ ಸಂವಾಹನಕ್ಕೆ ಅವಶ್ಯವಾದ ಮಾಧ್ಯಮವೆ ಆದರೂ, ವ್ಯಕ್ತಿಯ ಭಾವನೆಗಳು ಹೊರ ಹೊಮ್ಮಲು ಇರುವ ವಾಹಕವೂ ಸಹ ಆಗಿದೆ. ಒಂದು ಬೌಗೋಳಿಕ ಎಲ್ಲೆಯೊಳಗೆ ಜನರು ಹೊಂದಿರುವ ಸಂಸ್ಕೃತಿ ಉಳಿಯ ಬೇಕೆಂದರೆ ಆ ಎಲ್ಲೆಯೊಳಗಿನ ಭಾಷೆ ಅಸ್ತಿತ್ವದಲ್ಲಿರಲೇಬೇಕು. ಕನ್ನಡದ ಬಗ್ಗೆ ಹೇಳುವುದಾದರೆ, ಕನ್ನಡವು ದಕ್ಷಿಣ ಭಾರತದ ಭಾಷೆಗಳ ಮೂಲವೆಂದು ಗುರುತಿಸಲ್ಪಟ್ಟಿರುವ ಮೂಲದ್ರಾವಿಡದಿಂದ ಯಾವಾಗ ಆಡುಭಾಷೆಯಾಗಿ ಪರಿವರ್ತಿತವಾಯಿತೆಂದು ಖಚಿತವಾಗಿ ಹೇಳಲು ಅಸಾಧ್ಯ. ತಮಿಳು ಭಾಷೆಯು ದ್ರಾವಿಡ ಭಾಷೆಯಿಂದ ಬೇರ್ಪಟ್ಟ ಸಮಯದಲ್ಲಿಯೇ ಕನ್ನಡವು ಕೂಡ ಆಡುಭಾಷೆಯಾಗಿ ಬೇರ್ಪಟ್ಟಿತೆಂದು ಹೇಳಲಾಗುತ್ತದೆ. ಕನ್ನಡ ಭಾಷೆಯ ಲಿಪಿಯು ಸುಮಾರು ೨೦೦೦ ವರ್ಷಗಳಿಗಿಂತಲೂ ಹಳೆಯದು. ಐದನೆಯ ಶತಮಾನದ ಹಲ್ಮಿಡಿ ಶಾಸನದ ಸಮಯಕ್ಕಾಗಲೇ ಕನ್ನಡವು ಸಾಕಷ್ಟು ಅಭಿವೃದ್ಧಿ ಹೊಂದಿತು. ಲಿಪಿಯ ಉಗಮದ ಇತಿಹಾಸವನ್ನು ಗಮನಿಸಿದರೆ, ತಮಿಳಿಗಿಂತಲೂ ಕನ್ನಡದ ಲಿಪಿಯೇ ಮೊದಮೊದಲಿಗೆ ಹೆಚ್ಚು ಪ್ರವರ್ಧಮಾನಕ್ಕೆ ಬಂದಂತೆ ಕಾಣಿಸುತ್ತದೆ. ಕುಮುದೇಂದು ಮುನಿ ರಚಿಸಿದ ‘ಸಿರಿಭೂವಲಯ’ ಗ್ರಂಥದಲ್ಲಿ ಕನ್ನಡ ಭಾಷೆಗೆ ವಿಶ್ವದ ಎಲ್ಲಾ ಭಾಷೆಗಳನ್ನು ಅಡಗಿಸಿಕೊಳ್ಳುವ ಶಕ್ತಿ ಇದೆ ಎಂದು ಸಾಭೀತುಪಡಿಸಿದ್ದಾರೆ ಎಂದರು.

ಪ್ರಾ.ಮು.ಶಿಕ್ಷಕ ನಾಗೇಶ ಮಾತನಾಡಿ, ಸರಿಸುಮಾರು ಎರಡೂವರೆ ಸಾವಿರ ವರ್ಷಗಳ ಸಾಂಸ್ಕೃತಿಕ ಇತಿಹಾಸವನ್ನು ಹೊಂದಿದ ಈ ಕನ್ನಡ ನಾಡನ್ನು ಶಾತವಾಹನ, ಗಂಗ, ಕದಂಬ, ಚಾಲುಕ್ಯ, ರಾಷ್ಟ್ರಕೂಟ ಹೊಯ್ಸಳ ಮುಂತಾದ ರಾಜವಂಶದವರು ಆಳುವುದಲ್ಲದೆ ರಾಷ್ಟ್ರದ ಇತಿಹಾಸದಲ್ಲಿ ತಮ್ಮ ಕೀರ್ತಿಗಾಥೆಯನ್ನು ಸುವರ್ಣಾಕ್ಷರಗಳಿಂದ ದಾಖಲಿಸಿದ್ದಾರೆ. ಬೇಲೂರು-ಹಳೆಬೀಡು, ಬದಾಮಿ-ಪಟ್ಟದಕಲ್ಲು, ಐಹೊಳೆ ಹಂಪಿ ಮುಂತಾದ ಸ್ಥಳಗಳು ನಮ್ಮ ಭವ್ಯ ಇತಿಹಾಸ ಮತ್ತು ಪರಂಪರೆಗೆ ಸಾಕ್ಷಿಯಾಗಿವೆ. ಪ್ರಾಚೀನ ಕಾಲದಿಂದಲೂ ನಮ್ಮ ನಾಡು ಧರ್ಮ, ಸಾಹಿತ್ಯ, ಸಂಗೀತ, ನೃತ್ಯ, ಕಲೆ, ಕ್ರೀಡೆ, ಶಿಲ್ಪ ಮತ್ತು ವಾಸ್ತು ಶಿಲ್ಪಗಳಿಗೆ ಹೆಸರಾದುದು ಎಂದು ತಿಳಿಸಿದರು.

ಜೆ ಎಸ್ ಬಿ ಪ್ರತಿಷ್ಠಾನದ ಎಸ್ ಶಶಿಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮ ನಿಮಿತ್ತ ಶಾಲೆಯಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಕನ್ನಡ ಪುಸ್ತಕಗಳ ಬಹುಮಾನ, ಜೊತೆಗೆ ಶಾಲೆಯ ಎಲ್ಲಾ ಮಕ್ಕಳಿಗೆ ಕನ್ನಡ ಕಿರುಪುಸ್ತಕ ನೀಡಿ, ಕನ್ನಡ ಓದನ್ನು ಪ್ರೋತ್ಸಾಹಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರಾದ ಶ್ರೀನಿವಾಸ, ಹೇಮಚಂದ್ರ, ಭೂಮಿಕ, ಸುನಂದ ಸಿಬ್ಬಂದಿಗಳು, ಪೋಷಕರು ಮತ್ತು ವಿದ್ಯಾರ್ಥಿಗಳಿದ್ದರು.

About Mallikarjun

Check Also

ಸುಳ್ವಾಡಿ ವಿಷ ಪ್ರಸಾದ ಪ್ರಕರಣ ಸಾವಿಗೆ ಕಾರಣರಾದ :ಇಮ್ಮಡಿ ಮಹದೇವಸ್ವಾಮಿ ಜಾಮೀನು ಅರ್ಜಿ ಮತ್ತೆ ವಜಾ.

Sulvadi Visha Prasad case: Cause of death: Immadi Mahadevaswamy’s bail application dismissed again. ವರದಿ : …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.