Breaking News

ಅಪಘಾತದಲ್ಲಿ ನಿಧನರಾದ ವಡ್ಡರಹಟ್ಟಿ ನ್ಯಾಯಬೆಲೆ ಅಂಗಡಿ ಮಾಲಿಕಸತೀಶ ಅವರ ಕುಟುಂಬಕ್ಕೆ ಸಾಂತ್ವನ.

Nyayabele shop owner of Waddarahatti who died in an accident Condolences to Satish’s family.

ಜಾಹೀರಾತು

ಗAಗಾವತಿ: ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲಿಕರಾದ ಸತೀಶ್‌ರವರು ಕರ್ನಾಟಕ ರಾಜ್ಯ ಪಡಿತರ ವಿತರಕರ ಸಂಘದಿAದ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ತೆರಳುವ ಸಂದರ್ಭದಲ್ಲಿ ತುಮಕೂರು ಹತ್ತಿರ ರಸ್ತೆ ಅಪಘಾತ ಸಂಭವಿಸಿ ನಿಧನ ಹೊಂದಿದ್ದು ಅವರ ಕುಟುಂಬಕ್ಕೆ ರಾಜ್ಯಾಧ್ಯಕ್ಷರಾದ ಕೃಷ್ಣಪ್ಪನವರು ಹಾಗೂ ಕಾರ್ಯಾಧ್ಯಕ್ಷರಾದ ಡಿ. ತಾಯಣ್ಣನವರು ಸ್ವತಃ ಹಣ ಸಹಾಯ ಮಾಡಿ ಅವರಿಗೆ ಧೈರ್ಯ ತುಂಬಿದರು ಎಂದು ಕರ್ನಾಟಕ ರಾಜ್ಯ ಪಡಿತರ ವಿತರಕರ ಸಂಘದ ಗಂಗಾವತಿ ತಾಲೂಕ ಅಧ್ಯಕ್ಷರಾದ ಕೆ. ಮಂಜುನಾಥ ತಿಳಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಕೃಷ್ಣಪ್ಪರವರು ಮಾತನಾಡಿ, ಮೃತ ಸತೀಶ್‌ರವರ ಕುಟುಂಬಕ್ಕೆ ಸಾಂತ್ವನ ಹೇಳಿ, ರಾಜ್ಯದಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಸಗಟು ಮಳಿಗೆಗಳಿಂದ ನ್ಯಾಯಬೆಲೆ ಅಂಗಡಿಗಳಿಗೆ ಸಾಗಾಣಿಕೆ ಮಾಡುವ ಲಾರಿಗಳಿಗೆ ಜಿಪಿಎಸ್ ಅಳವಡಿಸಿ ಅಕ್ರಮವನ್ನು ತಡೆಗಟ್ಟಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಯಿತು ಎಂದರು.
ಇದೇ ಸಂದರ್ಭದಲ್ಲಿ ರಾಜ್ಯ ಕಮಿಟಿ ಸದಸ್ಯರಾದ ಹೇಮಣ್ಣ, ಹೊನ್ನಮ್ಮ, ಕೊಪ್ಪಳ ಜಿಲ್ಲಾಧ್ಯಕ್ಷರಾದ ಮಲ್ಲಪ್ಪ, ಕಾರಟಗಿ ತಾಲೂಕ ಅಧ್ಯಕ್ಷರಾದ ನಾಗರಾಜ ಕುಲಕರ್ಣಿ, ಪ್ರಮುಖರಾದ ದಾನನಗೌಡ ಹೇರೂರು, ಮಹಮ್ಮದ ಫಯಾಜ್, ವಿರುಪಾಕ್ಷಿ ಕಂಬಳೆ ಹಾಗೂ ಇನ್ನಿತರರು ಭಾಗವಹಿಸಿದ್ದರು.

About Mallikarjun

Check Also

ಕುಷ್ಟಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: ನೋಂದಣಿಗೆ ಸೂಚನೆ

Kushtagi Taluk Level Dasara Games: Notice for registration ಕೊಪ್ಪಳ ಆಗಸ್ಟ್ 29 (ಕರ್ನಾಟಕ ವಾರ್ತೆ): 2025-26ನೇ ಸಾಲಿನ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.