Breaking News

ಸರ್ಕಾರ ಕೂಡಲೆನಫೆಡ್ ಮೂಲಕಕೊಬ್ಬರಿಖರೀದಿ ಕೇಂದ್ರಗಳನ್ನು ತೆರೆಯಬೇಕು : ಕೆ.ಎಸ್. ಸದಾಶಿವಯ್ಯ

Govt should immediately open coconut buying centers through NAFED: K.S. Sadashivaiah

ಜಾಹೀರಾತು


ತಿಪಟೂರು : ಜಿಲ್ಲೆಯ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ತೆಂಗಿನ ಕೊಬ್ಬರಿಯೂ ಒಂದು. ಕೊಬ್ಬರಿ ಬೆಲೆ ಪಾತಾಳಕ್ಕೆ ಕುಸಿದಿದ್ದು ರೈತರು ಜೀವನ ನಡೆಸುವುದೇ ದುಸ್ತರವಾಗಿದೆ. ಆದ್ದರಿಂದ ಸರ್ಕಾರ ಘೋಷಿತ ೧೧೭೩೦ರೂ ಬೆಂಬಲ ಬೆಲೆಯಲ್ಲಿ ನಫೆಡ್ ಮೂಲಕ ಕೊಬ್ಬರಿ ಖರೀದಿಸಲು ಕೊಬ್ಬರಿ ಖರೀದಿ ಕೇಂದ್ರಗಳನ್ನು ಕೂಡಲೆ ತಾಲೂಕು ಕೇಂದ್ರಗಳಲ್ಲಿ ತೆರೆಯಬೇಕೆಂದು ಜಿಲ್ಲಾ ಕೃಷಿಕ ಸಮಾಜದ ಪ್ರತಿನಿಧಿ ಹಾಗೂ ಬಿಜೆಪಿ ಮುಖಂಡರಾದ ಕೆ.ಎಸ್. ಸದಾಶಿವಯ್ಯ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಪಡಿಸಿದ್ದಾರೆ.
ಕಳೆದ ವರ್ಷ ಕ್ವಿಂಟಾಲ್ ಕೊಬ್ಬರಿ ಬೆಲೆ ೧೯ಸಾವಿರವಿದ್ದು ಕೊಬ್ಬರಿ ಬೆಲೆ ಇಂದು ೮೫೦೦ಕ್ಕೆ ಇಳಿದಿದೆ. ಸರ್ಕಾರ ೧೧೭೩೦ರೂ ಬೆಂಬಲ ಘೋಷಣೆ ಮಾಡಿದ್ದರೂ ಮುಕ್ತ ಮಾರುಕಟ್ಟೆಯಲ್ಲಿ ಅದಕ್ಕಿಂತ ಕಡಿಮೆ ಬೆಲೆಯಲ್ಲಿ ಕೊಬ್ಬರಿಕೊಳ್ಳಲಾಗುತ್ತಿದೆ. ಸರ್ಕಾರ ಘೋಷಿತ ಬೆಂಬಲ ಬೆಲೆಗೂ ಕಡಿಮೆ ದರದಲ್ಲಿ ವರ್ತಕರು ಕೊಬ್ಬರಿ ಖರೀದಿಸುತ್ತಿದ್ದರೂ ಜಿಲ್ಲೆಯ ಜನಪ್ರತಿನಿಧಿ ಶಾಸಕರು ಜಾಣಕುರುಡು ವಹಿಸಿದ್ದು ರೈತರ ದುರ್ದೈವೇ ಸರಿ. ಕಳೆದ ವರ್ಷ ಜಿಲ್ಲೆಯ ರೈತರುಗಳು ಕೊಬ್ಬರಿಗೆ ಬೆಂಬಲ ಬೆಲೆ ಕೋರಿ ನಡೆಸಿದ ಪ್ರತಿಭಟನೆ ವೇಳೆಯಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ನಮ್ಮ ಸರ್ಕಾರ ಬಂದರೆ ಕ್ವಿಂಟಾಲ್ ಕೊಬ್ಬರಿಗೆ ೧೫೦೦೦ರೂ ಬೆಂಬಲ ಬೆಲೆ ನೀಡುವ ಘೋಷಣೆ ಮಾಡುವುದಾಗಿ ಹೇಳಿ ರೈತರಿಗೆ ಕೊಟ್ಟ ಮಾತನ್ನು ತಪ್ಪಿದ್ದಾರೆ.
ಆದ್ದರಿಂದ ಸರ್ಕಾರ ಕೂಡಲೆ ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಸಲು ತಾಲೂಕು ಕೇಂದ್ರಗಳಲ್ಲಿ ಕೊಬ್ಬರಿ ಖರೀದಿ ಕೇಂದ್ರಗಳನ್ನು ತೆರೆಯಬೇಕು. ಈ ಬಗ್ಗೆ ಬೆಳಗಾವಿಯಲ್ಲಿ ನಡೆಯುವ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾವಣೆ ಮಾಡಿ ತೆಂಗು ಬೆಳೆಗಾರರಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು ವಿಧಾನಸಭಾ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಮತ್ತು ಶಾಸಕರು, ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ. ವಿಜೆಯೇಂದ್ರ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿರವರಲ್ಲಿ ಮನವಿ ಮಾಡಿದ್ದಾರೆ.

About Mallikarjun

Check Also

ಜೆಜೆಎಂ ಕಾಮಗಾರಿ ಅವೈಜ್ಞಾನಿಕ :ಮಳೆ ನೀರು ಗ್ರಾಮದೊಳಕ್ಕೆ ಸಾರ್ವಜನಿಕರಆಕ್ರೋಶ

JJM’s work is unscientific: Public outrage over rain water in the village ವರದಿ : ಪಂಚಯ್ಯ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.