Ashiya, a student of Murarji Desai-01 School, Hirebenakal Bronze medal in 17-year-old girls’ karate competition.

ಗಂಗಾವತಿ: ಸಾರ್ವಜನಿಕ ಶಿಕ್ಷಣ ಇಲಾಖೆ ಎಸ್.ಜಿ.ಎಫ್ ಹೈಸ್ಕೂಲ್ ಗೇಮ್ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಡ್ರೀಮ್ ವರ್ಲ್ಡ್ ಮಾರ್ಷಲ್ ಆರ್ಟ್ಸ್ ಟ್ರಸ್ಟ್ ಸಂಸ್ಥೆಯ ವಿದ್ಯಾರ್ಥಿನಿಯಾದ ಆಫಿಯಾ ೧೭ ವರ್ಷದ ಬಾಲಕಿಯರ ವಿಭಾಗದಲ್ಲಿ ತೃತಿಯ ಸ್ಥಾನ ಪಡೆದು ಕಂಚಿನ ಪದಕ ಗಳಿಸುವುದರ ಮೂಲಕ ಗಂಗಾವತಿ ನಗರಕ್ಕೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾಳೆ ಎಂದು ಮುಖ್ಯ ತರಬೇತಿದಾರರಾದ ಡಾ. ಶಿಹಾನ್ ಜಬಿವುಲ್ಲಾ ಅವರು ತಿಳಿಸಿದ್ದಾರೆ.
ಈ ವಿದ್ಯಾರ್ಥಿನಿ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ-೧ ಹಿರೇಬೆಣಕಲ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಈ ವಿದ್ಯಾರ್ಥಿನಿಗೆ ಶಾಲಾ ಆಡಳಿತ ಮಂಡಳಿ ಮತ್ತು ದೈಹಿಕ ಶಿಕ್ಷಕರಾದ ಮಾರುತಿ ಭಜಂತ್ರಿ ಸರ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.