Breaking News

ಕನ್ನಡದಮೊದಲವಚನಗಾರ್ತಿವೀರವೈರಾಗ್ಯನಿಧಿ ಅಕ್ಕಮಹಾದೇವಿ-ಶಿಕ್ಷಕಶಿವಕುಮಾರಸ್ವಾಮಿ

Kannada’s First Orator Veeravairagyanidhi Akkamahadevi-Shikshakashivakumarswamy

ಜಾಹೀರಾತು
Screenshot 2023 11 26 19 16 18 51 E307a3f9df9f380ebaf106e1dc980bb6 300x173

ಚಾಮರಾಜನಗರ ತಾಲೂಕಿನ ಹಳ್ಳಿಕೆರೆಹುಂಡಿಯ ಜೆಎಸ್ಎಸ್ ಪ್ರೌಢಶಾಲೆಯಲ್ಲಿ ಇಂದು ಜೆ ಎಸ್ ಬಿ ಪ್ರತಿಷ್ಠಾನ ಆಯೋಜಿಸಿದ್ದ ‘ಕನ್ನಡ ಮಾಸಾಚರಣೆ ೨೦೨೩’ ಕಾರ್ಯಕ್ರಮವನ್ನು ಕನ್ನಡತಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರಿವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ. ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಅಕ್ಕ, ಎದುರಿಸಿದ ಪರೀಕ್ಷೆಗಳು ಬಹಳಷ್ಟು. ಅವರು ಸಮ ಸಮಾಜ, ಮಹಿಳೆಯರ ಸ್ವತಂತ್ರಕ್ಕಾಗಿ ನಡೆಸಿದ ಸಂಘರ್ಷ ಮತ್ತು ತ್ಯಾಗಮಯ ಬದುಕು ಎಲ್ಲರಿಗೂ ಮಾದರಿಯಾಗಿದೆ. ಅವರ ಒಂದೊಂದು ವಚನಗಳಲ್ಲಿ ಬದುಕಿನ ಮೌಲ್ಯ ಅಡಗಿವೆ. ಜೀವನದಲ್ಲಿ ಎಷ್ಟೇ ಕಷ್ಟ, ಸಮಸ್ಯೆಗಳು ಬಂದರೂ ಎದೆಗುಂದದೇ ದೈರ್ಯದಿಂದ ಎದುರಿಸಿ ಸ್ತ್ರೀ ಕುಲದ ಸ್ವಾಭಿಮಾನವನ್ನು ಎತ್ತಿ ಹಿಡಿದಿದ್ದರು. ಸಾಹಿತ್ಯದ ದೃಷ್ಟಿಯಿಂದ ಗಮನಿಸುವುದಾದರೆ, ಅಲ್ಲಮ ಮತ್ತು ಅಕ್ಕ ಅಂದಿನ ಅತ್ಯಂತ ವಿಶಿಷ್ಟ ಸಂವೇದನೆಯ ವ್ಯಕ್ತಿತ್ವದವರಾಗಿ ಗಮನ ಸೆಳೆಯುತ್ತಾರೆ. ಅನುಭಾವಿಯೂ, ಕವಿಯೂ ಆಗಿದ್ದ ಅಕ್ಕಮಹಾದೇವಿಯವರ ವಚನಗಳು, ಕನ್ನಡ ಸಾಹಿತ್ಯದ ಮೌಲಿಕ ಬರವಣಿಗೆಗಳಾಗಿವೆ. ಅಕ್ಕಮಹಾದೇವಿಯವರು ತೋರಿದ ದಿಟ್ಟತನ, ಧೈರ್ಯ ಇಂದಿನ ದಿನಗಳಲ್ಲಿ ಎಲ್ಲಾ ಮಹಿಳೆಯರು ನಿಜ ಜೀವನದಲ್ಲಿ ಆಚರಣೆಗೆ ತರಲು ಪ್ರಯತ್ನಿಸಬೇಕು ಎಂದು ಅವರು ಹೇಳಿದರು.

ಸಾನ್ನಿಧ್ಯ ವಹಿಸಿದ ಬಸವಯೋಗಿಪ್ರಭು ಸ್ವಾಮೀಜಿ ಮಾತನಾಡಿ, ಅಕ್ಕಮಹಾದೇವಿಯವರಿಗೆ ಅರಸೊತ್ತಿಗೆ ವೈಭವ ಇದ್ದರೂ ಅದನ್ನು ಧಿಕ್ಕರಿಸಿ ಮಹಿಳೆಯರ ಸಬಲೀಕರಣಕ್ಕಾಗಿ ಕ್ರಾಂತಿ ನಡೆಸಿದರು. ಜೀವನದಲ್ಲಿ ನಿಂದನೆ, ಟೀಕೆ ಬಂದರೂ ಹೇಗೆಲ್ಲ ಎದುರಿಸಬೇಕು ಎನ್ನುವುದು ಅಕ್ಕಮಹಾದೇವಿ ಅವರು ತಮ್ಮ ವಚನದಲ್ಲಿ ಬಹಳ ಸುಂದರವಾಗಿ ವಿವರಿಸಿದ್ದಾರೆ. ಜೀವನ ಸಾರ್ಥಕತೆಗೆ ಎಲ್ಲ ಮಹಿಳೆಯರು ಅಕ್ಕನ ವಚನ ತಪ್ಪದೇ ಪಠಣ ಮಾಡಬೇಕು ಎಂದು ತಿಳಿಸಿದರು.

ಜೆ ಎಸ್ ಬಿ ಪ್ರತಿಷ್ಠಾನದ ಎಸ್ ಶಶಿಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮ ನಿಮಿತ್ತ ಶಾಲೆಯಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಕನ್ನಡ ಪುಸ್ತಕಗಳ ಬಹುಮಾನ, ಜೊತೆಗೆ ಶಾಲೆಯ ಎಲ್ಲಾ ಮಕ್ಕಳಿಗೆ ಕನ್ನಡ ಕಿರುಪುಸ್ತಕ ನೀಡಿ, ಕನ್ನಡ ಓದನ್ನು ಪ್ರೋತ್ಸಾಹಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆ ಶಿಕ್ಷಕರಾದ ಸಿದ್ದಲಿಂಗಪ್ಪ, ಗಣೇಶ, ವೇದಾವತಿ, ಸಿಬ್ಬಂದಿಗಳು, ಪೋಷಕರು ಮತ್ತು ವಿದ್ಯಾರ್ಥಿಗಳಿದ್ದರು

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.