Valmiki shrilu jatra meeting for the city today

ಕೊಪ್ಪಳ: ನಗರದ ಹಳೆ ಜಿಲ್ಲಾ ಆಸ್ಪತ್ರೆ ಹಿಂದುಗಡೆ ಇರುವ ವಾಲ್ಮೀಕಿ ಭವನದಲ್ಲಿ ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳು ಆಗಮಿಸಿ ಸಮುದಾಯದ ವಿಶೇಷ ಸಭೆಯನ್ನು ನವೆಂಬರ್ ೨೯ ರಂದು ಬೆಳಿಗ್ಗೆ ೯.೩೦ ಕ್ಕೆ ನಡೆಸುವರು ಎಂದು ಸಮಾಜದ ಯುವ ಮುಖಂಡ ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾಧ್ಯಕ್ಷ ಟಿ. ರತ್ನಾಕರ ಅವರು ವಹಿಸಲಿದ್ದಾರೆ, ಸಭೆಯಲ್ಲಿ ಗುರುಪೀಠದ ಜಿಲ್ಲಾ ಧರ್ಮದರ್ಶಿ ರಾಮಣ್ಣ ಕಲ್ಲನವರ್, ತಾಲೂಕ ಅಧ್ಯಕ್ಷ ಶರಣಪ್ಪ ನಾಯಕ, ರಾಜ್ಯ ಕಾರ್ಯದರ್ಶಿ ಸುರೇಶ್ ಡೊಣ್ಣಿ ಸೇರಿದಂತೆ ಜಿಲ್ಲೆಯ ಅನೇಕ ಮುಖಂಡರು ಪಾಲ್ಗೊಳ್ಳುವರು. ಸದರಿ ಸಭೆಯು ಅತ್ಯಂತ ಮಹತ್ವದ್ದಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಿದ್ದು, ನಂತರ ಕುಕನೂರು, ಯಲಬುರ್ಗಾ ಮತ್ತು ಗಜೇಂದ್ರಗಡಕ್ಕೆ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.