Breaking News

ಪರಿಷತ್‌ನಲ್ಲಿ ಎರಡು ದಿನಗಳ ಕಾಲ ಉತ್ತರ ಕರ್ನಾಟಕ ಸಮಸ್ಯೆಗಳ ಕುರಿತು ಚರ್ಚೆ:ಸಭಾಪತಿ ಬಸವರಾಜ ಹೊರಟ್ಟಿ

Discussion on North Karnataka issues for two days in Parishad: Chairman Basavaraja Horatti

ಈ ಬಾರಿಯ ಪ್ರತಿಭಟನೆಗಳ ಸಂಖ್ಯೆ ಇಳಿಮುಖ ನಿರೀಕ್ಷೆ



ಬೆಳಗಾವಿ ಸುವರ್ಣಸೌಧ,ಡಿ.4ರಿಂದ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿಧಾನಪರಿಷತ್‌ನಲ್ಲಿ ಎರಡು ದಿನಗಳ ಕಾಲ ಮಹದಾಯಿ,ಕೃಷ್ಣಾ,ಬರಗಾಲದ ಸಮಸ್ಯೆ ಸೇರಿದಂತೆ ಉತ್ತರ ಕರ್ನಾಟಕದ ಪ್ರಮುಖ ಸಮಸ್ಯೆಗಳ ಕುರಿತು ಗಂಭೀರ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದರು.
ಬೆಳಗಾವಿಯ ಸುವರ್ಣಸೌಧದಲ್ಲಿ ಭಾನುವಾರ ಮಧ್ಯಾಹ್ನ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.


ಯಾವುದೇ ಭಾಗದ ಶಾಸಕರು ಉತ್ತರ ಕರ್ನಾಟಕದ ವಿಷಯಗಳ ಕುರಿತು ಚರ್ಚೆಗೆ ಆಸಕ್ತಿ ತೋರಿದರೇ ಮೊದಲ ಆದ್ಯತೆ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ ಸಭಾಪತಿ ಹೊರಟ್ಟಿ ಅವರು ಈ ಬಾರಿ ಪ್ರತಿಭಟನೆಗಳ ಸಂಖ್ಯೆ ಕಡಿಮೆಗೊಳಿಸಲು ಸಂಬAಧಿಸಿದ ಸಚಿವರು ಸಂಘ-ಸAಸ್ಥೆಗಳು ಮತ್ತು ಹೋರಾಟಗಾರರೊಂದಿಗೆ ಚರ್ಚಿಸಿದ್ದಾರೆ.ಬೆಳಗಾವಿ ಅಧಿವೇಶನವೆಂದರೇ ಪ್ರತಿಭಟನೆಗಳ ಅಧಿವೇಶನವೆಂಬ ಹಣೆಪಟ್ಟಿ ಅಳಿಸಿಹಾಕಲು ಕ್ರಮವಹಿಸಬೇಕೆಂದು ಸೂಚಿಸಿ ತಾವು ಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಪತ್ರ ಬರೆದಿದನ್ನು ಉಲ್ಲೇಖಿಸಿದ ಅವರು ಈ ಹಿನ್ನೆಲೆಯಲ್ಲಿ ಈ ಬಾರಿ ಪ್ರತಿಭಟನೆಗಳು ಕಡಿಮೆಯಾಗಬಹುದು ಎಂಬ ನಿರೀಕ್ಷೆ ಇದೆ ಎಂದರು.
ವಿಧಾನಪರಿಷತ್ ಕಲಾಪಗಳಿಗೆ ಈವರೆಗೆ 1207 ಪ್ರಶ್ನೆಗಳು ಸ್ವೀಕೃತವಾಗಿವೆ;ಅವುಗಳಲ್ಲಿ 1057 ಚುಕ್ಕೆ ರಹಿತ ಪ್ರಶ್ನೆಗಳಾಗಿವೆ.ನಿಯಮ 72ರ ಅಡಿ 111 ಪತ್ರಗಳು ಸ್ವೀಕೃತವಾಗಿವೆ. ಕಲಾಪಸೂಚಿಗೆ ಸಾಕಷ್ಟು ವಿಷಯಗಳಿವೆ ಎಂದರು.

ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್,ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷಿ,ವಿಧಾನಪರಿಷತ್ ಕಾರ್ಯದರ್ಶಿ ಮಹಾಲಕ್ಷಿö್ಮÃ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮತ್ತಿತರರು ಇದ್ದರು.

About Mallikarjun

Check Also

ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು, ದಂಡವಸೂಲಿ.

ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಬಿಜೆಪಿ ಮುಖಂಡ ಆಗಿರುವ ಮಹಿಬೂಬ್ ಸಾಬ್ ಮುಲ್ಲಾ (ಎಂ.ಡಿ.ಎಸ್) ತಂದೆ ಮೋದಿನ್ ಸಾಬ್ ಈತನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.