Breaking News

ಪೊಲೀಸ್ಇಲಾಖೆಯಿಂದಅಪರಾಧತಡೆಮಾಸಾಚರಣೆ 

Crime Prevention Month by Police Department

ಜಾಹೀರಾತು
Screenshot 2023 12 05 17 34 45 33 21e8cabcf42c673ec340bb67ba55b55b 300x161

ಗಂಗಾವತಿ.05. ಪೊಲೀಸ್ ಇಲಾಖೆಯಿಂದ ಅಪರಾಧ ತಡೆ ಗಂಗಾವತಿ ಸಮೀಪದ ದಾಸನಾಳ ಗ್ರಾಮದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಜೀವನ ಸಾಗಿಸಲು ಇರುವ ಕಾನೂನನ್ನು ಪಾಲನೆ ಮಾಡುವ ಕಡೆ ಸಾರ್ವಜನಿಕರ ಗಮನ ನೀಡಬೇಕು ಎಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಪುಂಡಪ್ಪ ಜಾಧವ್  ತಿಳಿಸಿದರು.

ಗ್ರಾಮದಲ್ಲಿ ಪ್ರಮುಖ ರಸ್ತೆ ಮತ್ತು ವಾರ್ಡ್ ಗಳಲ್ಲಿ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚಣೆ ಅಂಗವಾಗಿ ಸಾರ್ವಜನಿಕರಿಗೆ ಜಾಗೃತಿ ಮಂಡಿಸಲಾಯಿತು.

 ಗ್ರಾಮದ ನಿವಾಸಿಗಳು ಮನೆಗಳನ್ನು ಬೀಗ ಹಾಕಿ ಬೇರೆಡೆಗೆ ಹೋಗುವಾಗ ಪೊಲೀಸ್ ಠಾಣೆಗೆ ಲಿಖಿತ ಪತ್ರದೊಂದಿಗೆ ಮಾಹಿತಿ ನೀಡಬೇಕು.ಇಲ್ಲಾವಾದರೆ ಗೃಹ ರಕ್ಷಕ ತಂತ್ರಾಂಶದಲ್ಲಿ ನಿಮ್ಮ ಮನೆಯಿರುವ ಸ್ಥಳದ ಮಾಹಿತಿಯನ್ನು ಸೇರ್ಪಡೆ ಮಾಡಬೇಕು ಆಗ ಪೊಲೀಸ್ ಗಸ್ತು ನೀಡಲಾಗುವುದು ಮತ್ತು ದ್ವಿಚಕ್ರ ವಾಹನಗಳನ್ನು ಚಲಾಯಿಸುವಾಗ ಸವಾರರು ತಪ್ಪದೇ  ಹೆಲ್ಮಾಟ್ ಧರಿಸಿ ನಾಲ್ಕು ಚಕ್ರ ವಾಹನಗಳನ್ನು ಚಲಾಯಿಸುವ ಸವಾರರು ಕಡ್ಡಾಯವಾಗಿ ಸೀಟ್ ಬೆಲ್ಟ್ ಹಾಕಿ ಹಾಕಿಕೊಳ್ಳಬೇಕು ಇದರಿಂದ ಅಪಘಾತ ಸಂಭವಿಸಿದಾಗ ಜೀವಕ್ಕೆ ಅಪಾಯ ಕಡಿಮೆಯಾಗುತ್ತದೆ.ಸಮಾಜದ ರಕ್ಷಣೆಗೆ ಪೊಲೀಸ್ ಇಲಾಖೆ ಸದಾ ಸಿದ್ದ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಎಸ್ಐ ಮಂಜುನಾಥ ಹುಲ್ಲೂರು,ಮುಖ್ಯಪೇದೆ ಅಬ್ದುಲ್ ರಜಾಕ್, ಸಾರ್ವಜನಿಕರು ಸೇರಿದಂತೆ ಇತರರು ಇದ್ದರು

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.