Breaking News

ಹಿರಿಯ ಕಲಾವಿದ ಬಾಬಣ್ಣ ಕಲ್ಮನಿ ಅವರ ನಿಧನಕ್ಕೆ ಸಚಿವರಾದ ಶಿವರಾಜ ತಂಗಡಗಿ ತೀವ್ರ ಶೋಕ

Minister Shivraj Thangadagi deeply mourned the death of veteran artist Babanna Kalmani

ಕೊಪ್ಪಳ ಡಿಸೆಂಬರ್ 10 (ಕರ್ನಾಟಕ ವಾರ್ತೆ): ಕನ್ನಡ ರಂಗಭೂಮಿಯ ಹಿರಿಯ ಕಲಾವಿದ ಶ್ರೀ ಬಾಬಣ್ಣ ಕಲ್ಮನಿ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ನನ್ನದೇ ಜಿಲ್ಲೆಯವರಾದ ಕುಕನೂರಿನ ಬಾಬಣ್ಣ ಕಲ್ಮನಿ ಅವರು ಕನ್ನಡ ಸಾಂಸ್ಕೃತಿಕ ಲೋಕದಲ್ಲಿ ದೊಡ್ಡ ಹೆಸರು ಮಾಡಿದ ಕಲಾವಿದರು, ಕನ್ನಡ ರಂಗಭೂಮಿಗೆ ಅವರು ಕೊಟ್ಟ ಕೊಡುಗೆ ಅನನ್ಯವಾದದ್ದು. ಬಾಲ್ಯದಿಂದಲೇ ಕನ್ನಡ ರಂಗಭೂಮಿಗೆ ಪಾದಾರ್ಪಣೆ ಮಾಡಿದ ಬಾಬಣ್ಣ ಕಲ್ಮನಿ ಅವರಿಗೆ ರಂಗಭೂಮಿಯೇ ಜೀವನವಾಗಿತ್ತು. ಅವರು ಆರಂಭಿಸಿದ ಲಲಿತ ಕಲಾ ನಾಟ್ಯ ಸಂಘ ಅನೇಕ ಜನಪ್ರಿಯ ನಾಟಕಗಳ ಮೂಲಕ ದೊಡ್ಡ ಹೆಸರು ಮಾಡಿತ್ತು.
ಸ್ತ್ರೀ ಪಾತ್ರ ಹಾಗೂ ಪುರುಷ ಪಾತ್ರ ಎರಡರಲ್ಲೂ ತಮ್ಮ ಪ್ರತಿಭೆಯನ್ನು ಮೆರೆದಂತಹ ಹಿರಿಮೆ ಶ್ರೀ ಬಾಬಣ್ಣ ಕಲ್ಮನಿ ಅವರದ್ದು, 1993ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದ ಬಾಬಣ್ಣ ಕಲ್ಮನಿ ಅವರಿಗೆ 2021 -22ನೇ ಸಾಲಿನ ಪ್ರತಿಷ್ಠಿತ ಗುಬ್ಬಿ ವೀರಣ್ಣ ಪ್ರಶಸ್ತಿ ಘೋಷಿಸಲಾಗಿತ್ತು, ಆದರೆ, ಪ್ರಶಸ್ತಿ ಪ್ರದಾನಕ್ಕೆ ಮುನ್ನವೇ ಅವರು ದೈವಾಧೀನರಾದದ್ದು ಅತ್ಯಂತ ದುರ್ದೈವದ ಸಂಗತಿ. ಇದು ನನಗೆ ಅತ್ಯಂತ ನೋವುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವರಾದ ಶಿವರಾಜ ತಂಗಡಗಿ ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

About Mallikarjun

Check Also

ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು : ಡಾ.ಲಿಂಗರಾಜ್‌ಸರ್ಕಾರಿ ಉಪವಿಭಾಗಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆ

ಗಂಗಾವತಿ,14:ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು, ಅವರಿಗೆ ಗೌರವ ಸಲ್ಲಿಸಲೆಂದೇ ಪ್ರತಿ ವರ್ಷ ಮೇ.12 ರಂದು ಅಂತಾರಾಷ್ಟ್ರೀಯ ಶುಶ್ರೂಷಕಿಯರ ದಿನವನ್ನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.