Breaking News

ಅತಿಥಿ ಉಪನ್ಯಾಸಕರ ಸೇವಾ ಖಾಯಮಾತಿಗೆ ಆಗ್ರಹಿಸಿ ದಿನಾಂಕ: 23.11.2023ರಿಂದ ತರಗತಿ ಬಹಿಷ್ಕರಿಸಿ, ವೇತನ ರಹಿತ ಅನಿರ್ದಿಷ್ಟಾವಧಿ ಧರಣಿ ಯಲ್ಲಿ ಬಿ ಪದ್ಮಾವತಿ ಸುಭಾಷ್ ಆಚಾರ್ಯ. ಸಾಮಾಜ ಸೇವಕಿಭಾಗಿ

B Padmavati Subhash Acharya on indefinite sit-in without pay, class boycott from 23.11.2023 demanding termination of service of Guest Lecturer. Social worker


ಬಳ್ಳಾರಿ, ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರುಗಳು ತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ರಾಜ್ಯದಲ್ಲಿ ಈಗ ಹತ್ತು-ಹದಿನೈದು ವರ್ಷಗಳಿಂದ ಅತಿಥಿ ಉಪನ್ಯಾಸಕರು ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದೇ, ಆತ್ಮಹತ್ಯೆ ದಾರಿ ತುಳಿದಿದ್ದಾರೆ. ಕೆಲವರು ಆರ್ಥಿಕ ಮುಗ್ಗಟ್ಟಿನಿಂದ ಖಾಯಿಲೆಗೆ ಸರಿಯಾದ ಚಿಕಿತ್ಸೆ ಸಿಗದೆ ದುರಂತಕ್ಕೆ ಸಿಕ್ಕಿ ಬಳಲಿ ಹೆಣವಾಗಿದ್ದಾರೆ. ಅವರ ಕುಟುಂಬಗಳಿಗೆ ಆರ್ಥಿಕ ಭದ್ರತೆ ಇಲ್ಲದಂತಾಗಿದೆ. ಅತಿಥಿ ಉಪನ್ಯಾಸಕರ ಇಡೀ ಕುಟುಂಬ ಅನಾಥ ಪರಿಸ್ಥಿತಿ ಎದುರಿಸುತ್ತಿದೆ. ಅತಿಥಿ ಉಪನ್ಯಾಸಕ ವೃತ್ತಿಯಲ್ಲಿ ಸಾಕಷ್ಟು ಪ್ರತಿಭಾವಂತ ಅರ್ಹರು ಮತ್ತು ಬೋಧನಾ ಕೌಶಲ್ಯವುಳ್ಳರಿದ್ದಾರೆ. ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡುವುದು ವೈಜ್ಞಾನಿಕ ಮಾರ್ಗವಾಗಿದೆ. ನೆರೆ ರಾಜ್ಯಗಳಾದ ಆಂಧ್ರಪದೇಶ, ತಮಿಳುನಾಡು, ಕೇರಳ, ತೆಲಂಗಾಣ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿ ಸೇವಾ ಭದ್ರತೆಯನ್ನು ನೀಡಿವೆ. ಸರ್ಕಾರ ಯಾವುದೇ ಸಬೂಬು ಹೇಳದೆ ಬೇರೆ ಬೇರೆ ಇಲಾಖೆಗಳಲ್ಲಿ ಮಾಡಿದಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿಉಪನ್ಯಾಸಕರನ್ನು ಸಹ ಖಾಯಂ ಮಾಡಲೇಬೇಕು. ಬೆಳಗಾವಿಯಲ್ಲಿ ಡಿಸೆಂಬರ್ 4ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಅತಿಥಿ ಉಪನ್ಯಾಸಕರ ಸೇವಾ ಖಾಯಮಾತಿಗೆ ಸಂಬಂಧಿಸಿದಂತೆ ತಾವುಗಳು ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಅತಿಥಿ ಉಪನ್ಯಾಸಕರ ಪರವಾಗಿ ಧ್ವನಿ ಎತ್ತಿ ಅತಿಥಿ ಉಪನ್ಯಾಸಕರ ಖಾಯಂಗೊಳಿಸುವ ಬಗ್ಗೆ ಮಾತನಾಡಿ ಹತ್ತು ಹದಿನೈದು ವರ್ಷಗಳಿಂದಕಡಿಮೆ ಗೌರವ ಧನಕ್ಕೆ ದುಡಿಯುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಗೊಳಿಸಲು ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಮತ್ತು ಆ ನಿಟ್ಟಿನಲ್ಲಿ ವಿಸ್ತ್ರತವಾಗಿ ಚರ್ಚೆ ಕೈಗೊಂಡು ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವ ಸಂಬಂಧ ವಿಶೇಷ ನಿಯಮಾವಳಿ ರಚನೆಗೆ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳುವಂತೆ ಮಾಡಬೇಕೆಂದು ಒತ್ತಾಯಿಸಿ ಧರಣಿ ದರಣಿ ನಡೆಯುತ್ತದೆ.

About Mallikarjun

Check Also

ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು : ಡಾ.ಲಿಂಗರಾಜ್‌ಸರ್ಕಾರಿ ಉಪವಿಭಾಗಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆ

ಗಂಗಾವತಿ,14:ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು, ಅವರಿಗೆ ಗೌರವ ಸಲ್ಲಿಸಲೆಂದೇ ಪ್ರತಿ ವರ್ಷ ಮೇ.12 ರಂದು ಅಂತಾರಾಷ್ಟ್ರೀಯ ಶುಶ್ರೂಷಕಿಯರ ದಿನವನ್ನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.