CM Sidda Ramaiah, who met the Prime Minister, requested for the release of 18,177.44 crore drought relief
ನವದೆಹಲಿ, ಡಿ. ೧೯ : ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ ೧೮,೧೭೭.೪೪ ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ ೪೬೬೩.೧೨ ಕೋಟಿ ರೂ. ಇನ್‌ಪುಟ್ ಸಬ್ಸಿಡಿ, ೧೨,೭೫೭೭.೮೬ ಕೋಟಿ ರೂ. ತರ‍್ತು ಪರಿಹಾರ, ೫೬೬.೭೮ ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ ೩೬೩.೬೮ ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ. ರಾಜ್ಯದಲ್ಲಿ ೨೩೬ ರಲ್ಲಿ ೨೨೩ ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ ೧೯೬ ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ ೪೮.೧೯ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು. ಎನ್.ಡಿ.ಆರ್.ಎಫ್. ನಿಂದ ೪೬೬೩.೧೨ ಕೋಟಿ ರೂ. ಇನ್‌ಪುಟ್ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ. ರೈತರಿಗೆ ಇನ್‌ಪುಟ್ ಸಬ್ಸಿಡಿ ನೀಡಲು ೨೦೧೫-೧೬ ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು ೮ ರ‍್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ ೮೩ ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು ೧೦೦ ರಿಂದ ೧೫೦ ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದರು. ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ ೨೨-೦೯-೨೦೨೩ ರಂದ ಸಲ್ಲಿಸಲಾಗಿತ್ತು ಭಾರತ ರ‍್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್ ತಿಂಗಳ ೪ ರಿಂದ ೯ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ ೨೧ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್ ೨೦ ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್.ಡಿ.ಆರ್.ಎಫ್. ಅಡಿ ೧೭,೯೦೧.೭೩ ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತರ‍್ತು ಪರಿಹಾರದ೧೨,೫೭೭.೮೬ ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್ ೪ ರಂದು ಹೆಚ್ಚುವರಿಯಾಗಿ ೭ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ ೧೮,೧೭೭ ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟ ಮುಖ್ಯಮಂತ್ರಿಗಳು ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದರು. ಈ ಸಂದರ್ಭದಲ್ಲಿ ರಾಜ್ಯದ ಕೃಷಿ ಸಚಿವ ಕೃಷ್ಣಾ ಬೈರೆಗೌಡ ಭಾಗಿಯಾಗಿದ್ದರು.