Breaking News

ಕುಕನೂರ, ಕಾರಟಗಿ, ಕನಕಗಿರಿ ಆಸ್ಪತ್ರೆಗಳ ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಸಿದ್ಧಪಡಿಸಿ: ಶಿವರಾಜ ತಂಗಡಗಿ

Prepare proposal for upgradation of Kukanur, Karatagi, Kanakagiri hospitals: Shivraja Thangadagi

ಕೊಪ್ಪಳ ಡಿಸೆಂಬರ್ 23 (ಕರ್ನಾಟಕ ವಾರ್ತೆ): ಜನಸಂಖ್ಯೆಗೆ ತಕ್ಕಂತೆ ಆಸ್ಪತ್ರೆ ಸೇರಿದಂತೆ ಅಗತ್ಯ ವೈದ್ಯಕೀಯ ಸೌಕರ್ಯಗಳು ಇರಬೇಕು. ಈ ನಿಟ್ಟಿನಲ್ಲಿ ಕನಕಗಿರಿ, ಕಾರಟಗಿ ಮತ್ತು ಕುಕನೂರ ತಾಲೂಕುಗಳಲ್ಲಿ ಸಹ ತಾಲೂಕು ಆಸ್ಪತ್ರೆಗಳು ಕಾರ್ಯಾರಂಭ ಮಾಡಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಹೇಳಿದರು.
ಡಿಸೆಂಬರ್ 23ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕಾರಟಗಿ ಮತ್ತು ಕನಕಗಿರಿ ತಾಲೂಕುಗಳು ಜನರು ಸಹ ಹೆಚ್ಚಿನ ಚಿಕಿತ್ಸೆಗೆ ಗಂಗಾವತಿ ತಾಲೂಕು ಆಸ್ಪತ್ರೆಯನ್ನು ಅವಲಂಬಿಸಿದ್ದರಿಂದ ಅಲ್ಲಿ ಜನಸಂದಣಿಯಾಗುತ್ತಿದೆ. ಇದನ್ನು ತಪ್ಪಿಸಲು ಕಾರಟಗಿ ಮತ್ತು ಕನಕಗಿರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಮತ್ತು ಕುಕನೂರ ಆಸ್ಪತ್ರೆಯನ್ನು ಸಹ ಮೇಲ್ದರ್ಜೇಗೇರಿಸುವ ಬಗ್ಗೆ ಕೂಡಲೇ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸಲು ಸಚಿವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಅಂಬ್ಯುಲೆನ್ಸ್ ಲಭ್ಯತೆಯ ಬಗ್ಗೆ ಸಚಿವರು ಮಾಹಿತಿ ಕೇಳಿದರು. ಕೊಪ್ಪಳ ತಾಲೂಕಿನಲ್ಲಿ 5, ಕುಷ್ಟಗಿ ತಾಲೂಕಿನಲ್ಲಿ 3 ಮತ್ತು ಗಂಗಾವತಿ ತಾಲೂಕಿನಲ್ಲಿ 6 ಅಂಬುಲೆನ್ಸಗಳಿವೆ ಎಂದು ಡಿಎಚ್‌ಓ ಅವರು ಸಭೆಗೆ ತಿಳಿಸಿದರು. ಈ ವೇಳೆ ಪ್ರತಿಕ್ರಿಯಿಸಿದ ಸಚಿವರು, ಬೇರೆ ಬೇರೆ ತಾಲೂಕುಗಳಲ್ಲಿರುವಂತೆ ಯಲಬುರ್ಗಾ, ಕುಕನೂರ, ಕಾರಟಗಿ ಮತ್ತು ಕನಕಗಿರಿ ತಾಲೂಕುಗಳಲ್ಲಿ ಸಹ ಕಡ್ಡಾಯವಾಗಿ ಸುಸಜ್ಜಿತ ಅಂಬುಲೆನ್ಸ್ ವ್ಯವಸ್ಥೆ ಇರಲೇಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಯಾವ ಯಾವ ಕಡೆಗಳಲ್ಲಿ ಅಂಬುಲೆನ್ಸ್ ಇರುವುದಿಲ್ಲವೋ ಅಂತಹ ಕಡೆಗಳಲ್ಲಿ ಸಹ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಪ್ರಸ್ತಾವನೆಯೊಂದನ್ನು ಸಿದ್ಧಪಡಿಸಿ ಕಳುಹಿಸಲು ಸಚಿವರು ಸೂಚನೆ ನೀಡಿದರು.

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.