Breaking News

ಹೊಸ ವರ್ಷದಆಚರಣೆಯಲ್ಲಿ ರೇವ್ ಪಾರ್ಟಿಗಳಿಗೆ ನಿರ್ಬಂಧಿಸಿಅಕ್ರಮ ಹಾಗೂ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಒತ್ತಾಯ

Restrict to rave parties in celebration of New Year Forced to curb illegal and unethical activities.

ಗಂಗಾವತಿ: ತಾಲೂಕಿನ ಸಣಾಪುರ, ಆನೆಗುಂದಿ, ಸಂಗಾಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ರೇವ್ ಪಾರ್ಟಿಗಳಿಗೆ ನಿರ್ಬಂಧಿಸಿ, ಅಕ್ರಮ ಹಾಗೂ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಹೆಚ್. ಶಿವರಾಮೇಗೌಡ್ರು ಬಣ) ಯ ಗಂಗಾವತಿ ತಾಲೂಕ ಅಧ್ಯಕ್ಷರಾದ ಯಮನೂರ ಭಟ್ ತಹಶೀಲ್ದಾರರಿಗೆ ಒತ್ತಾಯಿಸಿದರು.
ಅವರು ಡಿಸೆಂಬರ್-೨೭ ಬುಧವಾರ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು. ಪ್ರತಿವರ್ಷದಂತೆ ಈ ವರ್ಷವೂ ಹೊಸ ವರ್ಷದ ಸಂಭ್ರಮಾಚರಣೆಯ ಸಿದ್ಧತೆಗಳು ನಡೆದಿದ್ದು, ರೇವ್ ಪಾರ್ಟಿಗಳ ಆಯೋಜನೆಗೆ ಕೆಲವು ರೆಸಾರ್ಟ್ ಮಾಲಿಕರು ಹಾಗೂ ರೆಸ್ಟೋರೆಂಟ್‌ಗಳ ಮಾಲಿಕರು ಮುಂದಾಗಿದ್ದು, ಇಂತಹ ಪಾರ್ಟಿಗಳಿಗೆ ನೆರೆಹೊರೆ ಜಿಲ್ಲೆ ಹಾಗೂ ರಾಜ್ಯಗಳಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದೆ. ಪ್ರಸ್ತುತ ದೇಶಾಧ್ಯಂತ ಕೊರೋನಾ ಭೀತಿ ಮತ್ತೆ ಆರಂಭವಾಗಿದ್ದು, ಹೆಚ್ಚಿನ ಪ್ರವಾಸಿಗರಿಂದಾಗಿ ಕೊರೋನಾ ಸೋಂಕು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಕಾರಣ ತಾಲೂಕಾಡಳಿತ ಮುಂಜಾಗ್ರತಾ ದೃಷ್ಟಿಯಿಂದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ನಿರ್ಬಂಧ ಹೊರಡಿಸಿ, ಅಕ್ರಮ ಹಾಗೂ ಅನೈತಿಕ ಚಟುವಟಿಕೆಗಳು ನಡೆಯದಂತೆ ಕ್ರಮವಹಿಸಬೇಕೆಂದು ಒತ್ತಾಯಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರ ಘಟಕ ಅಧ್ಯಕ್ಷರಾದ ಹನುಮೇಶ್ ಕುರುಬರು, ಉಪಾಧ್ಯಕ್ಷರಾದ ಅಂಬಾಸ್, ತಾಲೂಕು ಯುವ ಘಟಕ ಅಧ್ಯಕ್ಷರಾದ ಸುನಿಲ್ ಕುಮಾರ್ ಕುಲಕರ್ಣಿ, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಪವನ್‌ಕುಮಾರ್ ಗಡ್ಡಿ, ತಾಲೂಕು ಸಂಚಾಲಕರಾದ ಸುರೇಶ್ ಚನ್ನಳ್ಳಿ, ತಾಲೂಕು ಕಾರ್ಯದರ್ಶಿ ಹುಲುಗಪ್ಪ ಹಾರೆಗಾರ, ಮುತ್ತುರಾಜ್ ಕುಷ್ಟಗಿ, ವಿಜಯಕುಮಾರ ಸಮಗಾರ, ಮಾರುತಿ ಹಾಗೂ ರಕ್ಷಣಾ ವೇದಿಕೆಯ ಇನ್ನಿತರ ಪದಾಧಿಕಾರಿಗಳು ಭಾಗಿಯಾಗಿದ್ದರು.

About Mallikarjun

Check Also

ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು, ದಂಡವಸೂಲಿ.

ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಬಿಜೆಪಿ ಮುಖಂಡ ಆಗಿರುವ ಮಹಿಬೂಬ್ ಸಾಬ್ ಮುಲ್ಲಾ (ಎಂ.ಡಿ.ಎಸ್) ತಂದೆ ಮೋದಿನ್ ಸಾಬ್ ಈತನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.