Breaking News

ಚೆಕ್ ಬೌನ್ಸ್ ಕೇಸ್: ಸಚಿವ ಮಧು ಬಂಗಾರಪ್ಪಗೆ ದಂಡ ವಿಧಿಸಿದ ಕೋರ್ಟ್, ಕಟ್ಟದಿದ್ದರೆ ಜೈಲು ಶಿಕ್ಷೆ

Madhu Bangarappa Cheque Bounce Case: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕೋರ್ಟ್ ಶಿಕ್ಷೆ ನೀಡಿದೆ. ದಂಡದ ರೂಪದಲ್ಲಿ ಶಿಕ್ಷೆಯಾಗಿದ್ದು, ಒಂದು ವೇಳೆ ದಂಡ ಕಟ್ಟದಿದ್ದರೆ ಆರು ತಿಂಗಳು ಜೈಲುವಾಸ ಅನುಭವಿಸಲು ಕೋರ್ಟ್ ಆದೇಶಿಸಿದೆ.

ಬೆಂಗಳೂರು, (ಡಿಸೆಂಬರ್ 29): ಚೆಕ್ ಬೌನ್ಸ್ ಪ್ರಕರಣಕ್ಕೆ (Cheque Bounce Case) ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ(Madhu Bangarappa)  ಕೋರ್ಟ್ ಶಿಕ್ಷೆ ನೀಡಿದೆ. 6 ಕೋಟಿ 96 ಲಕ್ಷದ 70 ಸಾವಿರ ರೂಪಾಯಿ ದಂಡ‌ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ(special court)  ಆದೇಶ ಹೊರಡಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದರೆ 6 ತಿಂಗಳು ಸೆರೆವಾಸ‌ ಅನುಭವಿಸಲು ಆದೇಶಿಸಿದೆ.

6 ಕೋಟಿ 96 ಲಕ್ಷದ 70 ಸಾವಿರ ರೂ. ದಂಡದ ಹಣದಲ್ಲಿ 6,96,60,000 ದೂರುದಾರರಿಗೆ ಪರಿಹಾರವಾಗಿ ನೀಡಬೇಕು. ಇನ್ನುಳಿದ 10 ಸಾವಿರ ರೂಪಾಯಿ ಸರ್ಕಾರಕ್ಕೆ ದಂಡವಾಗಿ ನೀಡಲು ಕೋರ್ಟ್ ಆದೇಶಿಸಿದೆ.

ಕೋರ್ಟ್​ನಲ್ಲಿ ಕೇವಲ 50 ಲಕ್ಷ ರೂ. ನೀಡಿ ಉಳಿದ ಹಣ ಪಾವತಿಸಿರಲಿಲ್ಲ. ಜನವರಿ 30ರೊಳಗೆ 6.10 ಲಕ್ಷ ಪಾವತಿಸುವುದಾಗಿ ಮಧು ಬಂಗಾರಪ್ಪ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಆದ್ರೆ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ , ಮುಚ್ಚಳಿಕೆ ಒಪ್ಪಲು ನಿರಾಕರಿಸಿದೆ. ಈ ಹಿಂದೆಯೂ ಮಧು ಬಂಗಾರಪ್ಪ ನೀಡಿದ್ದ ಮುಚ್ಚಳಿಕೆ ಪಾಲಿಸಿಲ್ಲ. ಹೀಗಾಗಿ ಜಡ್ಜ್ ಜೆ.ಪ್ರೀತ್ ಅವರು ಮಧು ಬಂಗಾರಪ್ಪ ಮನವಿ ತಿರಸ್ಕರಿಸಿದ್ದಾರೆ.

ಪ್ರಕರಣ ಹಿನ್ನೆಲೆ

ಆಕಾಶ್ ಆಡಿಯೋ ಕಂಪನಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಧು ಬಂಗಾರಪ್ಪ ಅವರು ರಾಜೇಶ್ ಎಕ್ಸ್​ಪೋರ್ಟ್ ಸಂಸ್ಥೆಗೆ 6.60 ಕೋಟಿ ಬಾಕಿ ಪಾವತಿಗೆ ಚೆಕ್ ನೀಡಿದ್ದರು. ಆದ್ರೆ, 2011ರಲ್ಲಿ ಮಧು ಬಂಗಾರಪ್ಪ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ರಾಜೇಶ್ ಎಕ್ಸ್​ಪೋರ್ಟ್ ಸಂಸ್ಥೆ ಮಧು ಬಂಗಾರಪ್ಪ ವಿರುದ್ಧ 6.60ಕೋಟಿ ಚೆಕ್​ಬೌನ್ಸ್ ಕೇಸ್ ದಾಖಲಿಸಿತ್ತು. ಆದ್ರೆ, ಮಧು ಬಂಗಾರಪ್ಪ ಅವರು ಜಾಮೀನು ಪಡೆದುಕೊಂಡಿದ್ದರು.

About Mallikarjun

Check Also

ಬಸಾಪಟ್ಟಣಗ್ರಾಮದಲ್ಲಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮೇಣದಬತ್ತಿಬೆಳಗಿಸುವ ಮತದಾನ ಜಾಗೃತಿ ಕಾರ್ಯಕ್ರಮ

ಗಂಗಾವತಿ : ತಾಲೂಕಿನ ಬಸಾಪಟ್ಟಣ ಗ್ರಾ.ಪಂ. ಕಾರ್ಯಾಲಯದ ಮುಂದೆ ಲೋಕಸಭಾ ಚುನಾವಣೆ ಅಂಗವಾಗಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ತಾ.ಪಂ. …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.