Madhu Bangarappa Cheque Bounce Case: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕೋರ್ಟ್ ಶಿಕ್ಷೆ ನೀಡಿದೆ. ದಂಡದ ರೂಪದಲ್ಲಿ ಶಿಕ್ಷೆಯಾಗಿದ್ದು, ಒಂದು ವೇಳೆ ದಂಡ ಕಟ್ಟದಿದ್ದರೆ ಆರು ತಿಂಗಳು ಜೈಲುವಾಸ ಅನುಭವಿಸಲು ಕೋರ್ಟ್ ಆದೇಶಿಸಿದೆ.
ಬೆಂಗಳೂರು, (ಡಿಸೆಂಬರ್ 29): ಚೆಕ್ ಬೌನ್ಸ್ ಪ್ರಕರಣಕ್ಕೆ (Cheque Bounce Case) ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ(Madhu Bangarappa) ಕೋರ್ಟ್ ಶಿಕ್ಷೆ ನೀಡಿದೆ. 6 ಕೋಟಿ 96 ಲಕ್ಷದ 70 ಸಾವಿರ ರೂಪಾಯಿ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ(special court) ಆದೇಶ ಹೊರಡಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದರೆ 6 ತಿಂಗಳು ಸೆರೆವಾಸ ಅನುಭವಿಸಲು ಆದೇಶಿಸಿದೆ.
6 ಕೋಟಿ 96 ಲಕ್ಷದ 70 ಸಾವಿರ ರೂ. ದಂಡದ ಹಣದಲ್ಲಿ 6,96,60,000 ದೂರುದಾರರಿಗೆ ಪರಿಹಾರವಾಗಿ ನೀಡಬೇಕು. ಇನ್ನುಳಿದ 10 ಸಾವಿರ ರೂಪಾಯಿ ಸರ್ಕಾರಕ್ಕೆ ದಂಡವಾಗಿ ನೀಡಲು ಕೋರ್ಟ್ ಆದೇಶಿಸಿದೆ.
ಕೋರ್ಟ್ನಲ್ಲಿ ಕೇವಲ 50 ಲಕ್ಷ ರೂ. ನೀಡಿ ಉಳಿದ ಹಣ ಪಾವತಿಸಿರಲಿಲ್ಲ. ಜನವರಿ 30ರೊಳಗೆ 6.10 ಲಕ್ಷ ಪಾವತಿಸುವುದಾಗಿ ಮಧು ಬಂಗಾರಪ್ಪ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಆದ್ರೆ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ , ಮುಚ್ಚಳಿಕೆ ಒಪ್ಪಲು ನಿರಾಕರಿಸಿದೆ. ಈ ಹಿಂದೆಯೂ ಮಧು ಬಂಗಾರಪ್ಪ ನೀಡಿದ್ದ ಮುಚ್ಚಳಿಕೆ ಪಾಲಿಸಿಲ್ಲ. ಹೀಗಾಗಿ ಜಡ್ಜ್ ಜೆ.ಪ್ರೀತ್ ಅವರು ಮಧು ಬಂಗಾರಪ್ಪ ಮನವಿ ತಿರಸ್ಕರಿಸಿದ್ದಾರೆ.
ಆಕಾಶ್ ಆಡಿಯೋ ಕಂಪನಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಧು ಬಂಗಾರಪ್ಪ ಅವರು ರಾಜೇಶ್ ಎಕ್ಸ್ಪೋರ್ಟ್ ಸಂಸ್ಥೆಗೆ 6.60 ಕೋಟಿ ಬಾಕಿ ಪಾವತಿಗೆ ಚೆಕ್ ನೀಡಿದ್ದರು. ಆದ್ರೆ, 2011ರಲ್ಲಿ ಮಧು ಬಂಗಾರಪ್ಪ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ರಾಜೇಶ್ ಎಕ್ಸ್ಪೋರ್ಟ್ ಸಂಸ್ಥೆ ಮಧು ಬಂಗಾರಪ್ಪ ವಿರುದ್ಧ 6.60ಕೋಟಿ ಚೆಕ್ಬೌನ್ಸ್ ಕೇಸ್ ದಾಖಲಿಸಿತ್ತು. ಆದ್ರೆ, ಮಧು ಬಂಗಾರಪ್ಪ ಅವರು ಜಾಮೀನು ಪಡೆದುಕೊಂಡಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…