National Poet Kuvempu Birthday in Hanur.
ವರದಿ : ಬಂಗಾರಪ್ಪ ಸಿ ಹನೂರು
ಹನೂರು : ಕುವೆಂಪು ಅವರ ಆದರ್ಶ ನಮಗೆ ಮಾದರಿಯಾಗಿದೆ ಕನ್ನಡಕ್ಕೆ ಮೊಟ್ಟಮೊದಲು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕವಿಗಳಾಗಿದ್ದಾರೆ , ಇಂತಹ ಮಹಾನ್ ವ್ಯಕ್ತಿಗಳ
ಜನ್ಮದಿನವನ್ನು ಆಚರಿಸುವುದು ನಮ್ಮೆಲ್ಲರಿಗೂ ಸೌಭಾಗ್ಯದ ವಿಷಯವೆಂದು ಚಾಮರಾಜನಗರ ಜಿಲ್ಲೆಯ ಕರ್ನಾಟಕ ರಾಜ್ಯ ಒಕ್ಕಲಿಗರ ಜಿಲ್ಲಾಧ್ಯಕ್ಷರಾದ ನಾಗೇಂದ್ರ ತಿಳಿಸಿದರು. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿವತಿಂದ ಆಯೋಜಿಸಲಾಗಿದ್ದ ಸಮಯದಲ್ಲಿ ತಿಳಿಸಿದರು .
ಇದೇ ಸಮಯದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ನಟರಾಜೆಗೌಡ ಕುವೆಂಪು ವಿಶ್ವಮಾನವರಾಗಿ ಬೆಳೆದವರು ,ಅವರ ಕಥೆ,ಕಾದಂಬರಿಗಳು ಹಲವಾರು ನೈಜ ಘಟನೆಗೆ ಸಾಕ್ಷಿಯಾಗಿವೆ ಎಂದರು.
ಇದೇ ಸಂದರ್ಭದಲ್ಲಿ ಉಪ ತಹಶೀಲ್ದಾರ್ ನಾಗೇಂದ್ರ, ಕಂದಾಯ ನಿರೀಕ್ಷಾಕರಾದ ಮಾದೇಶ್ ಹಾಗೂ ಗ್ರಾಮ ಲೆಕ್ಕಾಧಿಕಾರಿ ಶೇಷಣ್ಣ, ಪಟ್ಟಣ ಪಂಚಾಯಿತಿ ಸದಸ್ಯರುಗಳಾದ, ಗಿರೀಶ್, ಹರೀಶ್, ಸುದೇಶ್ ಮತ್ತು ಒಕ್ಕಲಿಗ ಸಮುದಾಯದ ಮುಖಂಡರಾದ ,ರಾಜುಗೌಡ್ರು, ವೆಂಕಟೇಶ ,ಸಿದ್ದೆಗೌಡ್ರು,ಕ್ರಿಷ್ಣೆಗೌಡ್ರು ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…