Breaking News

ಕಾಂಗ್ರೆಸ್ ಪಕ್ಷ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆತೆಗೆದುಕೊಳ್ಳುತ್ತದೆ:ಸಚಿವ ಕೆ ವೆಂಕಟೇಶ್

Congress party takes all communities into confidence: Minister K Venkatesh.

ಜಾಹೀರಾತು


ವರದಿ : ಬಂಗಾರಪ್ಪ ಸಿ ಹನೂರು.
ಹನೂರು: ನಾವು ಯಾವ ಸಮುದಾಯ ಓಲೈಕೆ
ಮಾಡುತ್ತಿಲ್ಲ, ನಾವು ಕೂಡ ಹಿಂದೂಗಳೇ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ವೆಂಕಟೇಶ್ ತಿಳಿಸಿದರು. ಹುಬ್ಬಳ್ಳಿಯಲ್ಲಿ ಹಿಂದೂ ಕರಸೇವಕರನ್ನುಬಂಧಿಸಿರು ವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡುತ್ತಿದೆ. ಜನರನ್ನು ಮೆಚ್ಚಿಸಲು ಏನೇನೋ ಮಾಡುತ್ತಿದ್ದಾರೆ. ಕಾಂಗ್ರೆಸ್ ಎಲ್ಲ ಸಮುದಾಯದವರು ಇರುವಂತ ಪಕ್ಷ. ಕಾಂಗ್ರೆಸ್‌ ಪಕ್ಷಕ್ಕೆ ಹಿಂದೂಗಳು ಮುಸ್ಲಿಂರು, ಕ್ರೈಸ್ತರು, ಸಿಬ್ಬರು ಎಲ್ಲರೂ ಒಂದೇ ಅಂತಾ ಹೇಳಿದರು.

ಕಾಂಗ್ರೆಸ್‌ ಪಕ್ಷಕ್ಕೆ ಎಲ್ಲರೂ ಬೇಕು. ಕಾಂಗ್ರೆಸ್ ಪಕ್ಷ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಅವರು ರಾಜಕಾರಣ ಮಾಡುತ್ತಿದ್ದಾರೆ. ರಾಮಮಂದಿರ ರಾಜಕಾರಣವಲ್ಲದೇ ಮತ್ತೇನು ಎಂದು ಸಚಿವರು ಪ್ರಶ್ನಿಸಿದರು.ಹುಬ್ಬಳ್ಳಿ ಬಿಜೆಪಿ ಶಾಸಕ ಮಹೇಶ ಟೆಂಗಿನಕಾಯಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ಅತ್ಯಾಚಾರ ಪ್ರಕರಣ ನಡೆದಿವೆಯಾ? ಈ ಮೊದಲು ಬಿಜೆಪಿ ಸರ್ಕಾರದಲ್ಲಿಯೂ ಅತ್ಯಾಚಾರ ಪ್ರಕರಣಗಳು ನಡೆದಿವೆ. ಆದರೆ ರಾಜ್ಯದಲ್ಲಿ ಅಪರಾಧ ಕೃತ್ಯ ತಡೆಗೆ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದರು.

ಮಾದಪ್ಪನ ದರ್ಶನ ಪಡೆದ ಸಚಿವ: ಹೊಸ ವರ್ಷದ ಹಿನ್ನೆಲೆ ಸೋಮವಾರ ಬೆಟ್ಟದಲ್ಲಿ ವಾಸ್ತವ್ಯ ಮಾಡಿ, ಮಲೆಮಹದೇಶ್ವರನಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್‌ ವಿಶೇಷ ಪೂಜೆ ಸಲ್ಲಿಸಿದರು. ಸಚಿವರು ಬೆಳಗ್ಗೆ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿದರು. ನಂತರ ಸಂಜೆ ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ತೆರಳಿದರು. ಇದೇ ಸಮಯದಲ್ಲಿ ಅಧಿಕಾರಿಗಳು ಸೇರಿದಂತೆ ಭಕ್ತರು ಹಾಜರಿದ್ದರು.

About Mallikarjun

Check Also

ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವರಾದ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿಮಾಡಿ, ಸಮಾಲೋಚನೆ ನಡೆಸಿ ಬಳಿಕ ಮನವಿಪತ್ರ ಸಲ್ಲಿಕೆ

Today in Delhi, I met Union Civil Aviation Minister Kinjarapu Ramamohan Naidu, held discussions and …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.