Protest by farmer association demanding fulfillment of various demands.
ವರದಿ : ಬಂಗಾರಪ್ಪ ಸಿ ಹನೂರು .
ಹನೂರು:- ಕ್ಷೇತ್ರ ವ್ಯಾಪ್ತಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದ ವತಿಯಿಂದ ತಾಲೂಕಿನ ನಾಲ್‌ರೋಡ್‌ನಲ್ಲಿ ರಸ್ತೆ ತಡೆದು ರೈತ ಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ವಿವಿಧ ಗ್ರಮಾಗಳಿಂದ ಆಗಮಿಸದ ರೈತರು
ನಾಲ್‌ರೋಡ್‌ನ ಪ್ರಮುಖ ರಸ್ತೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಸರ್ಕಾರ, ಜಿಲ್ಲಾಡಳಿತ, ಶಾಸಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ತಡೆ ಹಿನ್ನೆಲೆಯಲ್ಲಿ ತಮಿಳುನಾಡು, ಮಾರ್ಟಳ್ಳಿ, ಜಲ್ಲಿಪಾಳ್ಯ ಕಡೆ ತೆರಳುವ ವಾಹನಗಳ ಸಂಚಾರ ಬಂದ್ ಆಗಿದ್ದು ಪ್ರಯಾಣಿಕರು ಕೆಲಕಾಲ ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ತಾಲೂಕಿನಲ್ಲಿರುವ ಕಾಡಂಚಿನ ರೈತರ ಸಮಸ್ಯೆಗಳು ಬಹಳಷ್ಟಿದ್ದು
ಈ ಭಾಗದ ಅಭಿವೃದ್ಧಿ ಕಡೆಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗಮನಹರಿಸದೆ ನಿರ್ಲಕ್ಷ್ಯ ಮಾಡಿದ್ದಾರೆ. ರಾಮಾಪುರದಿಂದ ನಾಲ್ ರೋಡ್ ಮೂಲಕವಾಗಿ ಜಲ್ಲಿಪಾಳ್ಯವರೆಗಿನ ರಸ್ತೆಯು ತೀರಾ ಹದಗೆಟ್ಟಿದ್ದು 40 ಟನ್ ಭಾರ ಹೊರುವ ವಾಹನಗಳು ಈ ಭಾಗದಲ್ಲಿ ಓಡಾಡುತ್ತಿವೆ. ಆದ್ದರಿಂದ ಗುಣಮಟ್ಟದ ಡಾಂಬರು ರಸ್ತೆ ನಿರ್ಮಾಣ ಮಾಡಬೇಕು. ಮಾರ್ಟಳ್ಳಿ ಗ್ರಾಮ ಹಾಗೂ ಹೂಗ್ಯಂ ಗ್ರಾಮಗಳ ಜಮೀನುಗಳ ಪೋಡಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.ಮಾರ್ಟಳ್ಳಿಯಿಂದ ಜಲ್ಲಿಪಾಳ್ಯದವರೆಗಿನ ಕಾಡಂಚಿನ ಪ್ರದೇಶಗಳ ಜಮೀನುಗಳಲ್ಲಿ ಕಾಡುಪ್ರಾಣಿಗಳ ಹಾವಳಿಹೆಚ್ಚಾಗಿದ್ದು ರೈಲ್ವೆ ಕಂಬಿಗಳ ಆಳವಡಿಸಬೇಕು. ನಾಲ್‌ರೋಡಿನಿಂದ ಜಲ್ಲಿಪಾಳ್ಯದವರೆಗೆ ನಿರಂತರ ಜ್ಯೋತಿ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದ್ದು ಕೂಡಲೇ ಪುನರ್ ಆರಂಭಿಸಬೇಕು. ಪಂಪ್‌ಸೆಟ್‌ಗಳಿಗೆ ಹಗಲು ವೇಳೆ 7 ತಾಸು ಶ್ರೀ ಫೇಸು ವಿದ್ಯುತ್ ನೀಡಬೇಕು ಎಂದರು.ಕೂಡಲೂರು ಹಾಗೂ ಸುಳ್ಳಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಆದ್ದರಿಂದ ಆರೋಗ್ಯ ಸಿಬ್ಬಂದಿ ಸರಿಯಾಗಿ ಕೆಲಸ ಮಾಡುವಂತೆ ಕ್ರಮವಹಿಸಬೇಕು. ಸ್ಥಳೀಯವಾಗಿ ಲಭ್ಯವಿರುವ ಕೊಟ್ಟಿಗೆ ಗೊಬ್ಬರವು ಹೊರ ರಾಜ್ಯಕ್ಕೆ ಸಾಗಾಣಿಕೆಯಾಗುತ್ತಿದ್ದು ಸ್ಥಳೀಯ ರೈತರಿಗೆ ಗೊಬ್ಬರ ದೊರಕುತ್ತಿಲ್ಲ. ಆದ್ದರಿಂದ ಕೊಟ್ಟಿಗೆ ಗೊಬ್ಬರವು ಹೊರ ರಾಜ್ಯಕ್ಕೆ ಹೋಗದಂತೆ ನಿರ್ಬಂಧ ವಿಧಿಸಬೇಕು ಎಂದು ಒತ್ತಾಯಿಸಿದರು.
ಸ್ಥಳಕ್ಕೆ ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಸೆಸ್ಕ್ ಇಲಾಖೆ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು. ಆದರೆ, ಪ್ರತಿಭಟನಾಕಾರರು ಸ್ಥಳಕ್ಕೆ ಜಿಲ್ಲಾಧಿಕಾರಿ ಬರಬೇಕು ಎಂದು ಪಟ್ಟುಹಿಡಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಪದಾಧಿಕಾರಿಗಳಾದ ಗೌಡೆಗೌಡ,ಹನೂರು ತಾಲ್ಲೂಕು ಅಧ್ಯಕ್ಷರಾದ ಅಮ್ಜಾದ್ ಖಾನ್ ,ಸಂಘಟನೆ ಕಾರ್ಯದರ್ಶಿ ಬಸವರಾಜು ಕಾಂಚಳ್ಳಿ ಸೇರಿದಂತೆ ಇನ್ನಿತರ ಮುಖಂಡರು, ಮಾರ್ಟಳ್ಳಿ, ವೆಟ್ಟುಕಾಡು, ಬಿದರಹಳ್ಳಿ, ಸಂದನಪಾಳ್ಯ, ಪೆದ್ದನಪಾಳ್ಯ, ಕೂಡ್ಲೂರು, ಹೂಗ್ಯಂ, ಜಲ್ಲಿಪಾಳ್ಯ ಸೇರಿದಂತೆ ಇತರೆ ಗ್ರಾಮಗಳ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು .